Sunday, July 15 , 2018 2:47 AMಧಾರಾಕಾರ ಮಳೆಗೆ ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಓರ್ವ ವ್ಯಕ್ತಿ ಬಲಿ25

ಚಿಕ್ಕಮಗಳೂರು : ಧಾರಾಕಾರ ಮಳೆಗೆ ಓರ್ವ ವ್ಯಕ್ತಿ ಬಲಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಗಿಣಿಕಲ್ ಸಮೀಪದ ಗೋಣೆಬೈಲು ಗ್ರಾಮದಲ್ಲಿ ನಡೆದಿದೆ. ಸುರೇಂದ್ರ (46) ಮೃತ ವ್ಯಕ್ತಿ. ಮಲೆನಾಡು ಭಾಗದಲ್ಲಿ ವರುಣನ ಆರ್ಭಟ ಜೋರಾಗಿರುವ ಹಿನ್ನೆಲೆ ರೈತನೊಬ್ಬ ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಸಾವನ್ನಪ್ಪಿದ್ದಾನೆ. ಜಮೀನಿನಲ್ಲಿ ಕೆಲಸ ಮಾಡುವ ವೇಳೆ ಈ ದುರ್ಘಟನೆ ಸಂಭವಿಸಿದೆ. ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಇದು 2 ನೇ ಬಲಿಯಾಗಿದೆ. ಈ ಸಂಬಂಧ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!