Thursday, August 16 , 2018 7:48 PMನಕಲಿ ವೋಟರ್​ ಐಡಿ ಪ್ರಕರಣದ ಹಿಂದೆ ಕಾಂಗ್ರೆಸ್ ಕೈವಾಡ : ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ147

ಬೆಂಗಳೂರು : ನಗರದ ಜಾಲಹಳ್ಳಿಯಲ್ಲಿ ಪತ್ತೆಯಾದ ನಕಲಿ ವೋಟರ್​ ಐಡಿ ಪ್ರಕರಣದ ಹಿಂದೆ ಕಾಂಗ್ರೆಸ್ ಕೈವಾಡವಿದೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರಾ ಆರೋಪಿಸಿದ್ದಾರೆ. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಪ್ರಜಾಪ್ರಭುತ್ವವನ್ನು ಕೆಳಮಟ್ಟಕ್ಕೆ ಕೊಂಡೊಯ್ದಿದೆ. ಡೀಲ್ ಮಾಡಿ ಪ್ರಜಾಪ್ರಭುತ್ವವನ್ನು ಧ್ವಂಸ ಮಾಡಲು ಹೊರಟಿದೆ. ನಕಲಿ ಮತದಾರರನ್ನು ಸೃಷ್ಟಿಸಿ ಗೆಲ್ಲಲು ಪ್ರಯತ್ನಿಸಿದ್ದಾರೆ ಎಂದು ಟೀಕಿಸಿದರು. ಈ ಪ್ರಕರಣದ ಬಗ್ಗೆ ಸಿದ್ದರಾಮಯ್ಯ, ರಾಹುಲ್ ಯಾವಾಗ ಮಾತಾಡ್ತಾರೆ? ಪ್ರಕರಣವನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಬೇಕು. ರಾಜರಾಜೇಶ್ವರಿ ನಗರ ಚುನಾವಣೆವನ್ನು ‌ಮುಂದೂಡಬೇಕು ಎಂದು ಒತ್ತಾಯಿಸಿದರು. ಪ್ರಕರಣದಲ್ಲಿ ಬಿಬಿಎಂಪಿಯ ಯಶವಂತಪುರ ವಾರ್ಡಿನ ಕಾಂಗ್ರೆಸ್ ಸದಸ್ಯ ಜಿ.ಕೆ. ವೆಂಕಟೇಶ ಬಂಧನವಾಗಿದೆ. ಇಲ್ಲಿ ಕಾಂಗ್ರೆಸ್ ನಕಲಿ ಮತದಾರರನ್ನು ಸೃಷ್ಟಿ ಮಾಡಿ ಗೆಲ್ಲುವುದರಲ್ಲಿ ನಂಬಿಕೆ ಇಟ್ಟಿದೆ ಎಂದು ಸಾಬೀತಾಗಿದೆ ಎಂದು ತಿಳಿಸಿದರು.

error: Content is protected !!