Sunday, July 15 , 2018 2:28 AMಕರಾವಳಿಯಲ್ಲಿ ಚುರುಕುಗೊಂಡ ಮುಂಗಾರು: ಧರೆಗುರುಳಿದ ಮರ, ವಿದ್ಯುತ್ ಕಂಬಗಳು!511

ಮಂಗಳೂರು : ಕರಾವಳಿಯಲ್ಲಿ ಮುಂಗಾರು ಚುರುಕು ಪಡೆದಿದೆ. ಮಂಗಳೂರಿನಲ್ಲಿ ನಿನ್ನೆ ರಾತ್ರಿ ಸುರಿದ ಮಳೆಗೆ ಹಲವಾರು ಮರಗಳು ಧರೆಗುರುಳಿರುವ ಪರಿಣಾಮ 2 ಮನೆಗಳು ಜಖಂಗೊಂಡಿವೆ. ನಗರದ ನಂತೂರು ಕದ್ರಿ ರಸ್ತೆಯಲ್ಲಿ ತಡರಾತ್ರಿ ಮಳೆಗೆ ರಸ್ತೆ ಕಾಣದೆ ಕಾರು ಚಾಲಕನೋರ್ವ ರಸ್ತೆ ಬದಿಯ ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ಕಾರು ನಜ್ಜುಗುಜ್ಜಾಗಿದೆ. ಸುಮಾರು 30ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ನಗರದ ಹಲವೆಡೆ ಉರುಳಿ ಬಿದ್ದಿದ್ದು, ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

ಇನ್ನು ಹಂಪನಕಟ್ಟೆಯಲ್ಲಿ ಭಾರೀ ಗಾತ್ರದ ಮರ ಧರಾಶಾಯಿಯಾಗಿದ್ದು, ಹಲವು ಮನೆಗಳಿಗೆ ಹಾನಿಯಾಗಿದೆ. ನಿನ್ನೆ ಇಡೀ ದಿನ ಸುರಿದಿದ್ದ ಮಳೆ ಇಂದು ಮುಂದುವರಿಯುವ ಸಾಧ್ಯತೆಯಿದೆ. ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ನದಿ , ಹೊಳೆಗಳು ಉಕ್ಕಿ ಹರಿಯುತ್ತಿದೆ. ಕಡಲ ಅಬ್ಬರವೂ ಹೆಚ್ಚಾಗಿದ್ದು , ಜಿಲ್ಲಾಡಳಿತ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದೆ.

error: Content is protected !!