Thursday, August 16 , 2018 7:47 PMಕುಖ್ಯಾತ ರೌಡಿಶೀಟರ್ ಜಯಂತ್‌ನನ್ನು ದುಷ್ಕರ್ಮಿಗಳ ತಂಡ ಮಾರಾಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಕೊಲೆ!1641

ಬೆಂಗಳೂರು : ರೌಡಿಶೀಟರ್‌ರೊಬ್ಬನನ್ನು ಬರ್ಬರವಾಗಿ ಕೊಲೆಯಾದ ಘಟನೆ ನಗರದ ಕೋಣನಕುಂಟೆ ಕ್ರಾಸ್ ಬಳಿ ನಡೆದಿದೆ. ವಸಂತನನಗರದ ರೌಡಿ ಕವಳನ ಬಾಮೈದ ರಾಕೇಶ್ ಹತ್ಯೆ ಬೆನ್ನಲ್ಲೇ ನಗರದಲ್ಲಿ ಮತ್ತೊಬ್ಬ ರೌಡಿಶೀಟರ್ ಜಯಂತ್ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಜಯಂತ್ (೨೮) ಮೃತ ರೌಡಿಶೀಟರ್ ಆಗಿದ್ದು, ಈತ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿಶೀಟರ್ ಪಟ್ಟಿಗೆ ಸೇರಿದವನಾಗಿದ್ದಾನೆ. ಜಯಂತ್ ಸ್ನೇಹಿತರೊಂದಿಗೆ ಪಾರ್ಟಿಗೆ ಹೋಗಿದ್ದ, ಮದ್ಯಪಾನ ಮಾಡಿದ್ದ. ಪಾರ್ಟಿ ಮುಗಿಸಿಕೊಂಡು ಬಾರಿನಿಂದ ಹೊರಬಂದ ಜಯಂತನನ್ನು ಹಿಂಬಾಲಿಸಿದ ದುಷ್ಕರ್ಮಿಗಳು, ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ತೀವ್ರ ಹಲ್ಲೆಗೊಳಗಾದ ಜಯಂತ್ ಕುಸಿದು ಬಿದ್ದಿದ್ದು, ರಸ್ತೆ ಮಧ್ಯದಲ್ಲಿಯೇ ಕೊಚ್ಚಿ ಕೊಲೆ ಮಾಡಿದ್ದಾರೆ. ಈ ಕೃತ್ಯದಲ್ಲಿ ಆತನ ಸ್ನೇಹಿತರು ಭಾಗಿಯಾಗಿದ್ದಾರೆ ಎಂಬ ಅನುಮಾನ ವ್ಯಕ್ತವಾಗಿದೆ. ಸ್ಥಳಕ್ಕೆ ಸುಬ್ರಹ್ಮಣ್ಯಪುರ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ಕಿಮ್ಸ್ ಆಸ್ಪತ್ರೆ ಶವಾಗಾರಕ್ಕೆ ಜಯಂತ್ ಮೃತ ದೇಹವನ್ನು ಸಾಗಿಸಲಾಗಿದೆ. ಮೃತ ಜಯಂತ್ ವಿರುದ್ಧ ಕೊಲೆಗೆ ಯತ್ನ, ದರೋಡೆ, ಸುಲಿಗೆ ಸೇರಿದಂತೆ ಒಟ್ಟು ೮ ಪ್ರಕರಣ ದಾಖಲಾಗಿದ್ದವು. ಜಯಂತ್ ಮೇಲೆ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯಲ್ಲಿ ರೌಡಿ ಪಟ್ಟಿ ತೆರೆಯಲಾಗಿತ್ತು. ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

error: Content is protected !!