Sunday, September 23 , 2018 3:37 AMಮಾಜಿ ಶಿಕ್ಷಣ ಸಚಿವ ಬಿ.ಎ.ಮೊಹಿದ್ದೀನ್ ಇನ್ನಿಲ್ಲ: ಉಸಿರಾಟದ ತೊಂದರೆಯಿಂದ ಕೊನೆಯುಸಿರೆಳೆದ ಹಿರಿಯ ರಾಜಕಾರಣಿ120

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಶಿಕ್ಷಣ ಸಚಿವ ಬಿ.ಎ. ಮೊಹದ್ದೀನ್ ಕೊನೆಯುಸಿರೆಳೆದಿದ್ದಾರೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರು, ಬೆಂಗಳೂರಿನ ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಕಾಂಗ್ರೆಸ್ ಪಕ್ಷದ ಮೂಲಕ ತಮ್ಮ ರಾಜಕೀಯ ವೃತ್ತಿ ಜೀವನ ಆರಂಭಿಸಿದ ಮೊಹದ್ದೀನ್, 1978 ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಶಾಸಕರಾಗಿ ಚುನಾಯಿತರಾಗಿದ್ದರು. ಬಳಿಕ ಜನತಾ ಪರಿವಾರ ಸೇರ್ಪಡೆಗೊಂಡು ಮಾಜಿ ಸಿಎಂ ಜೆ.ಹೆಚ್. ಪಟೇಲ್ ಸರ್ಕಾರದಲ್ಲಿ ಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸಿದ್ದರು. ತದನಂತರ ಮತ್ತೆ ಕಾಂಗ್ರೆಸ್ ಪಕ್ಷ ಸೇರಿದ ಅವರು ಎಐಸಿಸಿ ಸದಸ್ಯರಾಗಿಯೂ ಕಾರ್ಯ ನಿರ್ವಹಿಸಿದ್ದರು.

ಬಿ.ಎ. ಮೊಹದ್ದೀನ್​ರವರ ಪಾರ್ಥಿವ ಶರೀರವನ್ನು 8 ಗಂಟೆಗೆ ಸಂಜಯ ನಗರ ನಿವಾಸಕ್ಕೆ ಕೊಂಡೊಯ್ದಿದ್ದು, ಮಧ್ಯಾಹ್ನ 11 ಗಂಟೆವರೆಗೆ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ . ಇದಾದ ಬಳಿಕ ಅವರ ಹುಟ್ಟೂರು ಮಂಗಳೂರಿಗೆ ಕೊಂಡೊಯ್ದು ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ.

error: Content is protected !!