Thursday, August 16 , 2018 7:46 PM











ಮಂಗಳೂರು ಖಾಸಗಿ ಬಸ್ಸ್ ಕಂಡಕ್ಟರ್ ನಿಂದ ಪ್ರಯಾಣಿಕನ ಮೇಲೆ ಹಲ್ಲೆ, ಗೂಂಡಾಗಿರಿ! : ವಿಡಿಯೋ ವೈರಲ್ 



1686

ಮಂಗಳೂರು : ನಗರದ ಖಾಸಗಿ ಬಸ್ಸೊಂದರ ಕಂಡಕ್ಟರ್ ಪ್ರಯಾಣಿಕರೊಬ್ಬರ ಮೇಲೆ ಹಲ್ಲೆ ಮಾಡಿ, ಗೂಂಡಾಗಿರಿ ನಡೆಸಿದ ಘಟನೆ ನಡೆದಿದೆ. ನಗರದ ಬಿಜೈ ವೃತ್ತದಲ್ಲಿ ಖಾಸಗಿ ಬಸ್ಸೊಂದರ ಕಂಡಕ್ಟರ್ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕನೊಬ್ಬ ಬಸ್ಸಿನಿಂದ ಇಳಿಯುತ್ತಿದ್ದಂತೆ ಬಸ್ಸಿನಿಂದ ಎಳೆದು ಹೊರ ಹಾಕಿ, ಕಾಲಿನಿಂದ ತುಳಿದು ಹಲ್ಲೆ ನಡೆಸಿದ್ದಾನೆ. ಪ್ರಯಾಣಿಕ ಮದ್ಯಪಾನ ಮಾಡಿದ್ದ ಎನ್ನಲಾಗಿದ್ದು, ಇದೇ ಕಾರಣಕ್ಕಾಗಿ ಕಂಡಕ್ಟರ್ ಹಲ್ಲೆಗೆ ಮುಂದಾಗಿದ್ದಾನೆ ಎನ್ನಲಾಗಿದೆ. ಬಸ್ಸಿನ ಕಂಡಕ್ಟರ್ ಪ್ರಯಾಣಿಕನಿಗೆ ಹಲ್ಲೆ ನಡೆಸುತ್ತಿರುವ ದೃಶ್ಯವನ್ನು ಸ್ಥಳದಲ್ಲಿದ್ದ ವ್ಯಕ್ತಿಯೊಬ್ಬರು ಚಿತ್ರೀಕರಿಸಿದರು. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಖಾಸಗಿ ಬಸ್ಸ್ ಕಂಡಕ್ಟರ್ ವಿರುದ್ದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.

error: Content is protected !!