Sunday, September 23 , 2018 3:01 AM











ಅಕ್ರಮ ಮರಳು ದಾಸ್ತಾನು; ದಕ್ಷ ಪೊಲೀಸ್ ಅಧಿಕಾರಿ ರಾಮರಾವ್ ನೇತೃತ್ವದಲ್ಲಿ ದಾಳಿ



844

ಮಂಗಳೂರು; ಗ್ರಾಮಾಂತರ ಠಾಣಾ ವ್ಯಾಪ್ತಿಯ ವಲಚ್ಚಿಲ್, ಅಡ್ಯಾರ್, ಮತ್ತು ಅರ್ಕುಳ ಎಂಬಲ್ಲಿ ಖಾಸಗಿ ಸ್ಥಳದಲ್ಲಿ ಸಾಮಾನ್ಯ ಮರಳನ್ನು ಅಕ್ರಮವಾಗಿ ದಾಸ್ತಾನು ಮಾಡಿ ಇಟ್ಟಿದ್ದ ಪ್ರದೇಶಕ್ಕೆ  ಮಂಗಳೂರು ದಕ್ಷಿಣ ವಿಭಾಗದ ಎ.ಸಿ.ಪಿ. ದಕ್ಷ, ಪ್ರಮಾಣಿಕ ಪೊಲೀಸ್ ಅಧಿಕಾರಿ ‌ಕೆ. ರಾಮರಾವ್ ಅವರು ನೇತೃತ್ವದ ದಾಳಿ ಮಾಡಿ ಅಕ್ರಮ ಮರಳು ದಾಸ್ತಾನು ಅಡ್ಡೆಯನ್ನು ಪತ್ತೆ ಮಾಡಿರುವ ಘಟನೆ ‌ನಡೆದಿದೆ. ಸ್ಥಳಕ್ಕೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿ ಕರೆಸಿಕೊಂಡು ಸುಮಾರು 780 ಟನ್ (ಸುಮಾರು 78 ಲೋಡ್) ಮರಳನ್ನು ವಶಪಡಿಸಿಕೊಂಡಿದ್ದಾರೆ. ಸ್ವಾಧೀನಪಡಿಸಿಕೊಂಡಿರುವ ಮರಳಿನ ಅಂದಾಜು ಒಟ್ಟು ಮೌಲ್ಯ ರೂ. 5,00,000/- ಆಗಿದೆ.  ಸದ್ರಿ ಮರಳನ್ನು ಮುಂದಿನ ಸೂಕ್ತ ಕ್ರಮಕ್ಕಾಗಿ ಉಪ-ನಿರ್ದೇಶಕರು, ಗಣಿ ಮತ್ತು ಭೂವಿಜ್ಞಾನ ಇಲಾಖೆ ಮಂಗಳೂರು ರವರಿಗೆ ಹಸ್ತಾಂತರಿಸಲಾಗಿದೆ. ಕಾರ್ಯಾಚರಣೆಯಲ್ಲಿ ಮಂಗಳೂರು ದಕ್ಷಿಣ ಉಪ-ವಿಭಾಗದ ಎ.ಸಿ.ಪಿ.  ಕೆ.ರಾಮರಾವ್ ಅವರು, ದಕ್ಷಿಣ ಉಪ ವಿಭಾಗದ ರೌಡಿ ನಿಗ್ರಹದಳವರು ಮತ್ತು ಮಂಗಳೂರು ಗ್ರಾಮಾಂತರ ಠಾಣೆಯ ಅಧಿಕಾರಿ ಮತ್ತು ‌ ಸಿಬ್ಬಂದಿಗಳು ಭಾಗವಹಿಸಿದ್ದರು.

error: Content is protected !!