Sunday, June 16 , 2019 4:02 AM

ಕ್ರೈಂ












ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಬಿಜೆಪಿ ನಾಯಕ ಸ್ಪರ್ಧಾ ಕಣದಲ್ಲಿ : ಕಲ್ಲಡ್ಕ ಪ್ರಭಾಕರ್ ಭಟ್ಟರ ಪಟ್ಟ ಶಿಷ್ಯ ಶ್ರೀಕರ ಪ್ರಭು!



514

ಮಂಗಳೂರು : ನಗರದ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಮಾಜಿ ನಾಯಕ ಸ್ಪರ್ಧಾ ಕಣದಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ಟರ ಪಟ್ಟ ಶಿಷ್ಯ ಶ್ರೀಕರ ಪ್ರಭು ಅವರ ಚುನಾವಣಾ ಪ್ರಚಾರಕ್ಕೆ ಉತ್ತಮ ಬೆಂಬಲ ದೊರೆತ್ತಿದ್ದು, ಭಾರೀ ಕುತೂಹಲಕ್ಕೆ ಮೂಡಿಸಿದೆ. ಅವರ ವ್ಯವಸ್ಥಿತವಾಗಿ ನಡೆಯುತ್ತಿರುವ ಪ್ರಚಾರ ಕಾರ್ಯದ ಮುಂದಿನ ಹಂತವಾಗಿ ಚುನಾವಣಾ ಕಾರ್ಯಾಲಯದ ಮುಂದೆ ಬೃಹತ್ ಬಲೂನ್ ಹಾರಿಬಿಡುವ ಕಾರ್ಯ ಯಶಸ್ವಿಯಾಗಿ ನಡೆಯಿತು. ಬೃಹತ್ ಬಲೂನಿನಲ್ಲಿ ಶ್ರೀಕರ ಪ್ರಭು ಮತ್ತು ಅವರ ಚುನಾವಣಾ ಚಿಹ್ನೆಯಾದ ಆಟೋ ರಿಕ್ಷಾವನ್ನು ಚಿತ್ರಿಸಲಾಗಿದ್ದು, ಪಕ್ಷೇತರ ಅಭ್ಯರ್ಥಿ ಶ್ರೀಕರ ಪ್ರಭು ಅವರು ತಮ್ಮ ೯ ಹಂತದ ಚುನಾವಣಾ ಪ್ರಚಾರದ ಹಂತದಲ್ಲಿ ಅಪಾರಸಂಖ್ಯೆಯ ಅಭಿಮಾನಿಗಳು ಮತ್ತು ಕಾರ್ಯಕರ್ತರ ಸಮಾಗಮದಲ್ಲಿ ಬೃಹತ್ ಬಲೂನ್ ಗಗನಕ್ಕೇರಿಸಲಾಯಿತು. ಈ ವೇಳೆ ಮಾತನಾಡಿದ ಶ್ರೀಕರ ಪ್ರಭು ಅವರು ಇದು ವಿಜಯದ ಬಲೂನು, ಇದು ಎಷ್ಟು ಎತ್ತರ ಹೋಗುತ್ತದೋ, ಅಷ್ಟೇ ಮತಗಳ ಅಂತರದಿಂದ ನನ್ನ ಗೆಲುವು ನಿಮ್ಮೆಲ್ಲರ ಆಶೀರ್ವಾದದಿಂದ ಆಗುವುದು ಎಂದು ಅಭಿಪ್ರಾಯಪಟ್ಟರು. ಮೂವತ್ತು ವರ್ಷಗಳ ಸಾಮಾಜಿಕ ಜೀವನದಲ್ಲಿ ನಾನು ಮಾಡಿದ ಸೇವೆಯನ್ನು ಮತದಾರ ಗಮನಿಸಿ, ನನಗೆ ಆಶೀರ್ವಾದ ಮಾಡುತ್ತಾನೆ. ಈ ಬಾರಿ ನನಗೆ ಆಶೀರ್ವಾದ ಮಾಡಿ ನಿಮ್ಮ ಮನೆ ಮನೆಯ ಸಮಸ್ಯೆಗೆ ಸ್ಪಂದಿಸುವ ಕೆಲಸ ನಾನು ಮಾಡುತ್ತೇನೆ. ಹೇಗೆ ಆಟೋರಿಕ್ಷಾ ದಿನದ ೨೪ ಗಂಟೆ ವಾರದ ೭ ದಿನ, ವರ್ಷದ ೩೬೫ ದಿನವೂ ಕೆಲಸ ಮಾಡುತ್ತದೋ ಹಾಗೆ ನಾನು ನಿಮ್ಮ ಸೇವೆ ಮಾಡುತ್ತೇನೆ ನನಗೆ ಈ ಸಲ ಒಂದು ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಶ್ರೀಕರ ಪ್ರಭು ಅಭಿಮಾನಿ ಬಳಗದ ಅಧ್ಯಕ್ಷ ಕೆ.ಪಿ. ಶೆಟ್ಟಿ ಬೇಡೆಮಾರ್, ಪ್ರಧಾನ ಕಾರ್ಯದರ್ಶಿ ಪ್ರೇಮ್ ಚಂದ್ರ, ಉಸ್ತುವಾರಿ ಸುರೇಶ ಶೆಟ್ಟಿ, ಅಶ್ವಿತ್ ಕುಮಾರ್, ಶರತ್ ಅಮೀನ್, ಜೈರಾಮ್ ಕಾಮತ್, ಯತೀಶ್ ಕುಮಾರ್, ಕಿಶೋರ್ ಕುಮಾರ್, ಜಗದೀಶ್ ಬಂಜನ್, ರವಿ ಕಾವೂರ್, ಪದ್ಮರಾಜ್, ಶ್ರೀಲತಾ ಗೋಪಾಲಕೃಷ್ಣ, ಸೀಮಾ ಪ್ರಭು, ಮಾಯಾ ನಾಯಕ್, ಐಶ್ವರ್ಯ ನಾಯಕ್ ಉಪಸ್ಥಿತರಿದ್ದರು.

More

ಮಡಿಕೇರಿ: ನಗರದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿಸಿದೆ. ಶಿಕ್ಷಕಿಯನ್ನು ಕೊಂದ ವ್ಯಕ್ತಿಯೋರ್ವ...

ಮಂಗಳೂರು: ಕರಾವಳಿಯಲ್ಲಿ ಮುಂಗಾರು ಮಳೆ ಆರಂಭವಾಗಿದೆ. ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಉಂಟಾದ...


ಮಂಗಳೂರು; ನಗರದ ರೌಡಿಶೀಟರ್ ಒಬ್ಬನ ಮೇಲೆ ನಗರದ ಪಚ್ಚನಾಡಿ ಎಂಬಲ್ಲಿ ಪೊಲೀಸರು...

ಮಂಗಳೂರು: ಬಿಜೆಪಿಯ ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿ ಸಂಘದಿಂದ ಬಂದು ಚತುರ ಸಂಘಟಕ,...


ಬೆಂಗಳೂರು: ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗುವುದಂತೂ ಗ್ಯಾರಂಟಿ ಹಾಗಾದರೆ ರೇವಣ್ಣ ಆವೇಶದಲ್ಲಿ...

ಉಡುಪಿ: ಉಡುಪಿಯ ಮಲ್ಪೆ ಬಂದರಿನಿಂದ ಏಳು ಮಂದಿ ಮೀನುಗಾರರು ಬೋಟ್ ಸಮೇತ...


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಾಡಂಚಿನಲ್ಲಿ ಕಾಡುಕೋಣಗಳ ಹಾವಳಿ ಹೆಚ್ಚಿದೆ. ಕಾಡುಕೋಣಗಳ...

ಪುಂಜಾಲಕಟ್ಟೆ: ಕಾಡಿನಿಂದ ಊರಿಗೆ ಬಂದ ಕಾಡುಕೋಣವೊಂದು ಗೋಬರ್‌ ಗ್ಯಾಸ್‌ ಗುಂಡಿಯೊಳಗೆ ಬಿದ್ದ ಘಟನೆ...


Copyright 2019 www.policevarthe.com | All Right Reserved
error: Content is protected !!