Thursday, February 21 , 2019 4:59 PMಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಕುಖ್ಯಾತ ಅಂತರ್ ಜಿಲ್ಲಾ ಸರಕಳ್ಳನ ಬಂಧನ598

ಮಂಗಳೂರು; ಕುಖ್ಯಾತ ಅಂತರ್ ಜಿಲ್ಲಾ ಸರಕಳ್ಳನನ್ನು ನಗರದ ಸಿಸಿಬಿ ಪೊಲೀಸರು ಚಿನ್ನಾಭರಣ ಸಹಿತ ಬಂಧಿಸಿದ್ದಾರೆ.

ಮಂಗಳೂರು ನಗರದ ಸುರತ್ಕಲ್ ಸಮೀಪದ ಕಾಟಿಪಳ್ಳದ 2ನೇ ಬ್ಲಾಕ್ ನ ಈದ್ಗಾ ಮಸೀದಿ ಬಳಿಯ ಪಾತಿಮ ಮನೆ ನಿವಾಸಿ ಶಾಕೀಬ್ ಯಾನೆ ಸಬ್ಬು(25) ಬಂಧಿತ ಆರೋಪಿ.

ಪ್ರಕರಣದ ಸಾರಾಂಶ; ಆರೋಪಿಯೂ ಮಂಗಳೂರು ನಗರ ಹಾಗೂ ಉಡುಪಿ ಜಿಲ್ಲೆಯ ಅನೇಕ ಪ್ರದೇಶಗಳಲ್ಲಿ ಸರಕಳ್ಳತನ ನಡೆಸಿದ್ದ ಎನ್ನಲಾಗಿದೆ.

ಮೂಡಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಸುಭಾಷನಗರ ಎಂಬಲ್ಲಿ  ಮಾರುತಿ ರಿಡ್ಜ್ ಕಾರಿನಲ್ಲಿ ಯಶೋಧ ಎಂಬವರ ಅಂಗಡಿಗೆ ಹೋಗಿ 10 ರೂಪಾಯಿಯ ನೆಲಕಡಲೆ ಕೇಳಿಕೊಂಡು ನಂತರ ಅವರು ನೆಲಕಡಲೆ ಕಟ್ಟುತ್ತಿದ್ದ ಸಮಯ ಅವರ ಕುತ್ತಿಗೆಯಿಂದ ಚಿನ್ನದ ಚೈನ್ ನ್ನು ಸುಲಿಗೆ ನಡೆಸಿದ ಪ್ರಕರಣ., ಉಡುಪಿ ಜಿಲ್ಲೆಯ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಇರ್ವತ್ತೂರು ಎಂಬಲ್ಲಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಕರಿಯಾ ಮೂಲ್ಯ ಎಂಬವರ ಕುತ್ತಿಗೆಯಿಂದ ಚಿನ್ನದ ಸರವನ್ನು ಸುಲಿಗೆ ಮಾಡಿದ ಪ್ರಕರಣ., ಉಡುಪಿ ಜಿಲ್ಲೆಯ ಶಿರ್ವಾ ಪೊಲೀಸ್ ಠಾಣಾ ವ್ಯಾಪ್ತಿಯ ಪಿಲಾರ್ ಖಾನ್ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಆಲಿಸ್ ಕುಟಿನ್ಹೋ(72) ಎಂಬ ಮಹಿಳೆಯ ಎಂಬವರ ಕುತ್ತಿಗೆಯಿಂದ 2 ಚಿನ್ನದ ಸರಗಳನ್ನು ಸುಲಿಗೆ ಮಾಡಿದ ಪ್ರಕರಣ., ಉಡುಪಿ ಜಿಲ್ಲೆಯ ಕಾರ್ಕಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕುಕ್ಕುಂದೂರು ಗ್ರಾಮದ ಹಾರ್ಜಡ್ಡು ಎಂಬಲ್ಲಿ  ಶ್ರೀಮತಿ ಗೀತಾ ಕಿಣಿ ಎಂಬವರ ಕುತ್ತಿಗೆಯಿಂದ ಚಿನ್ನದ ಸರವನ್ನು ಸುಲಿಗೆ ಮಾಡಿದ ಪ್ರಕರಣ.,‌ ಹಾಗೂ ಉಡುಪಿ ಜಿಲ್ಲೆಯ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ರೆಂಜಾಳ ಮಾರಿಗುಡಿ ಎಂಬಲ್ಲಿ  ಶ್ರೀಮತಿ ಗೌರಿ ನಾಯಕ್ ಎಂಬವರ ಕುತ್ತಿಗೆಯಿಂದ ಚಿನ್ನದ ಕರಿಮಣಿ ಸರವನ್ನು ಸುಲಿಗೆ ಮಾಡಿದ ಪ್ರಕರಣಗಳಲ್ಲಿ ಬಂಧಿತ ಆರೋಪಿ ತನ್ನ ಸಹಚರರೊಂದಿಗೆ ಕಾರು ಹಾಗೂ ಬೈಕ್ ಗಳಲ್ಲಿ ಬಂದು ಅಮಾಯಕ ವಯಸ್ಕರ ಹಾಗೂ ಮಹಿಳೆಯರ ಕುತ್ತಿಗೆಯಿಂದ ಚಿನ್ನದ ಸರ ಹಾಗೂ ಕರಿಮಣಿ ಸರಗಳನ್ನು ಸುಲಿಗೆ ನಡೆಸಿದ್ದಾನೆ ಎನ್ನಲಾಗಿದೆ.

ಆರೋಪಿ ಶಾಕಿಬ್ @ ಸಾಬು ಎಂಬಾತನ ವಿರುದ್ಧ ಈ ಹಿಂದೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ, ಕಳ್ಳತನಕ್ಕೆ ಸಂಬಂಧಪಟ್ಟಂತೆ 6 ಪ್ರಕರಣಗಳು, ಬಜ್ಪೆ ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ ಹಾಗೂ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಬೈಕ್ ಕಳವು ಪ್ರಕರಣ ದಾಖಲಾಗಿದೆ.

ಬಂಧಿತ ಆರೋಪಿ ಶಾಕಿಬ್ @ ಸಾಬು ಎಂಬಾತನ ಜೊತೆಯಲ್ಲಿ ಸರಕಳ್ಳತನ ಪ್ರಕರಣದಲ್ಲಿ ಇತರ ಆರೋಪಿಗಳು ಭಾಗಿಯಾಗಿದ್ದು, ಇತರ ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಬಂಧಿತ ಆರೋಪಿಯಿಂದ ಕಳ್ಳತನ ಮಾಡಿದ 140 ಗ್ರಾಂ ತೂಕದ ಒಟ್ಟು 5 ಚಿನ್ನದ ಸರ, ಒಂದು ಕರಿಮಣಿ ಸರ, 2 ಚಿನ್ನದ ಪೆಂಡೆಂಟ್ ಗಳನ್ನು ಹಾಗೂ ಒಂದು ಮಾರುತಿ ರಿಡ್ಜ್ ಕಾರು, 2 ಮೊಬೈಲ್ ಫೋನ್ ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪೊಲೀಸರು ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 6,60,000/ ಆಗಿದೆ.

ಆರೋಪಿಯನ್ನು ಹಾಗೂ ವಶಪಡಿಸಿಕೊಂಡ ಸೊತ್ತನ್ನು ಮುಂದಿನ ಕ್ರಮಕ್ಕಾಗಿ ಮೂಡಬಿದ್ರಿ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.

ಕಾರ್ಯಾಚರಣೆಯಲ್ಲಿ ಸಿಸಿಬಿ ಘಟಕದ ಇನ್ಸ್ ಪೆಕ್ಟರ್ ಶಾಂತಾರಾಮ, ಪಿಎಸ್ಐ ಶ್ಯಾಮ್ ಸುಂದರ್ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

error: Content is protected !!