Thursday, February 21 , 2019 5:00 PMಅರಣ್ಯ ಪ್ರದೇಶದ ರಸ್ತೆಗಳಲ್ಲಿ ಅಪಘಾತ ತಡೆಗೆ ಸರಕಾರ ಚಿಂತನೆ130

ಬೆಂಗಳೂರು : ಖಾಸಗಿ ಬಸ್ ಡಿಕ್ಕಿಯಾಗಿ ರೌಡಿ ರಂಗ ಎಂಬ ಆನೆ ಮೃತಪಟ್ಟ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಸರಕಾರ ಅರಣ್ಯ ಭಾಗದಲ್ಲಿ ಹಾದು ಹೋಗುವ ಎಲ್ಲ ರಸ್ತೆಗಳಲ್ಲಿ ವೇಗ ನಿಯಂತ್ರಣಕ್ಕಾಗಿ ‘ಹಂಪ್’ಗಳನ್ನು ಅಳವಡಿಸಲು ನಿರ್ಧರಿಸಿದೆ.

ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಆನೆಚೌಕೂರು ಎಂಬಲ್ಲಿ ವಾಹನವೊಂದು ಡಿಕ್ಕಿಯಾದ ಪರಿಣಾಮ ರಂಗ ಎಂಬ ಆನೆ ಮೃತಪಟ್ಟಿತ್ತು. ಅರಣ್ಯ ಇಲಾಖೆಯಿಂದ ನಗರದಲ್ಲಿ ಹಮ್ಮಿಕೊಂಡಿದ್ದ ೬೪ನೇ ವನ್ಯಜೀವಿ ಸಪ್ತಾಹ ಸಮಾರೋಪ ಸಮಾರಂಭದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅರಣ್ಯ ಸಚಿವ ಆರ್.ಶಂಕರ್, ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ರಸ್ತೆ ಉಬ್ಬುಗಳನ್ನು ಅಳವಡಿಸುವ ಕುರಿತು ಲೋಕೋಪಯೋಗಿ ಇಲಾಖೆಯೊಂದಿಗೆ ಚರ್ಚೆ ನಡೆಸಿ ಶೀಘ್ರದಲ್ಲಿ ಅನುಷ್ಠಾನ ಮಾಡಲಾಗುವುದು ಎಂದರು.

ನಾಗರಹೊಳೆಯ ಅರಣ್ಯದಲ್ಲಿ ರಾತ್ರಿ ಬಸ್ ಸಂಚಾರಕ್ಕೆ ಕೇರಳ ಸರ್ಕಾರದ ಒತ್ತಡ ಇದೆ. ಆದರೆ, ಕರ್ನಾಟಕ ಇದಕ್ಕೆ ವಿರುದ್ಧವಾಗಿದೆ. ಈ ವಿಚಾರವನ್ನೇ ಮುಖ್ಯಮಂತ್ರಿಗಳು ಸ್ಪಷ್ಟವಾಗಿ ಹೇಳಿದ್ದಾರೆ. ಅಲ್ಲದೆ, ಈ ವಿಚಾರ ನ್ಯಾಯಾಲಯದಲ್ಲಿದ್ದು, ಚರ್ಚೆ ಅಗತ್ಯವಿಲ್ಲ ಎಂದರು.

ಅರಣ್ಯದ ರಸ್ತೆಗಳಲ್ಲಿ ರಾತ್ರಿ ಸಂಚಾರ ಸ್ಥಗಿತ: ಹೆಚ್ಚು ವಾಹನಗಳು ಹಾದು ಹೋಗುವ ಅರಣ್ಯ ಪ್ರದೇಶದ ರಸ್ತೆಗಳನ್ನು ಅರಣ್ಯ ಇಲಾಖೆ ವತಿಯಿಂದ ಗುರುತಿಸಲಾಗುವುದು. ಅಂತಹ ಭಾಗಗಳಲ್ಲಿನ ಪ್ರಾಣಿಗಳ ಪ್ರಮಾಣ ಪತ್ತೆ ಹಚ್ಚಿದ ಬಳಿಕ ರಾತ್ರಿ ಸಂಚಾರ ರದ್ದು ಮಾಡಬೇಕೇ ಎಂಬುದರ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದರು.

error: Content is protected !!