Thursday, February 21 , 2019 6:08 PMಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದಾಗ ಯಂತ್ರಕ್ಕೆ ಸಿಲುಕಿ ಕಾರ್ಮಿಕ ಸಾವು55

ರಾಮನಗರ: ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದಾಗ ಯಂತ್ರಕ್ಕೆ ಸಿಲುಕಿ ಕಾರ್ಮಿಕನೊಬ್ಬ ಮೃತಪಟ್ಟಿರುವ ದಾರುಣ ಘಟನೆ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಿಹಾರ ಮೂಲದ ಧರ್ಮೇಂದ್ರಕುಮಾರ್ (42) ಮೃತಪಟ್ಟ ಕಾರ್ಮಿಕ.

ಸುಮಾರು ಆರು ವರ್ಷಗಳಿಂದ ತಾಲೂಕಿನ ಅಚ್ಚಲುದೊಡ್ಡಿ ಗ್ರಾಮದ ಸೂಪರ‍್ಫೈನ್‌ವೆಲ್ಡ್‌ಮೆಸ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಇವರು ಎಂದಿನಂತೆ ಇಂದು ಕಾರ್ಖಾನೆಗೆ ಬಂದು ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಯಂತ್ರಕ್ಕೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಆಡಳಿತ ಮಂಡಳಿ ಪೊಲೀಸರಿಗೆ ವಿಷಯ ತಿಳಿಸಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಶವವನ್ನು ರಾಜರಾಜೇಶ್ವರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಸುರಕ್ಷತಾ, ಮುಂಜಾಗೃತೆ ಇಲ್ಲದೇ ಇರುವುದೇ ಅವಘಡಕ್ಕೆ ಕಾರಣ ಎಂದು ತಿಳಿದು ಬಂದಿದೆ. ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

error: Content is protected !!