Thursday, February 21 , 2019 5:30 PMಬೈಕ್‌ಗೆ ಹಿಂಬದಿಯಿಂದ ಲಾರಿ ಡಿಕ್ಕಿ ಯುವಕ ಸಾವು73

ಬೆಂಗಳೂರು: ಲಾರಿ ಬೈಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟಿರುವ ಘಟನೆ ನಾಗಸಂದ್ರ ಸರ್ಕಲ್ ಬಳಿ ನಡೆದಿದೆ. ಗಿರೀಶ್ (೨೦) ಮೃತ ಬೈಕ್ ಸವಾರ.

ಮೆಡಿಕಲ್ ರೆಪ್ರಸೆಂಟೀವ್ ಆಗಿ ಕೆಲಸ ಮಾಡುತ್ತಿದ್ದ ಗಿರೀಶ್ ಮಂಗಳವಾರ ರಾತ್ರಿ ೮ ಗಂಟೆ ಸುಮಾರಿಗೆ ನಾಗಸಂದ್ರದ ಸರ್ಕಲ್ ಬಳಿ ತೆರಳುತ್ತಿದ್ದಾಗ, ಹಿಂಬದಿಯಿಂದ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಗಿರೀಶ್ ನೆಲಕ್ಕುರುಳಿ ಬಿದ್ದಿದ್ದು, ಆತನ ಮೈಮೇಲೆ ಲಾರಿಯ ಹಿಂಬದಿ ಚಕ್ರ ಹರಿದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

ಘಟನೆ ನಡೆದ ಬಳಿಕ ಲಾರಿ ನಿಲ್ಲಿಸದೇ ಚಾಲಕ ಪರಾರಿಯಾಗಿದ್ದಾನೆ. ತಮಿಳುನಾಡು ನೋಂದಣಿ ಹೊಂದಿರುವ ಲಾರಿ ಆಗಿದ್ದು ನಂಬರ್ ಸಿಕ್ಕಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಕಾಮಾಕ್ಷಿಪಾಳ್ಯ ಸಂಚಾರ ಠಾಣೆ ಪೊಲೀಸರು ತಿಳಿಸಿದ್ದಾರೆ.

error: Content is protected !!