Sunday, June 16 , 2019 5:14 AM

ಕ್ರೈಂ












ಜಮೀನಿನಲ್ಲಿ ಯುವತಿಯ ಶವ ಪತ್ತೆ: ಕೊಲೆ ಶಂಕೆ



97

ದಾವಣಗೆರೆ: ಜಿಲ್ಲೆಯ ಹೊರ ವಲಯದ ಕರೂರು ಗ್ರಾಮದ ಜಮೀನೊಂದರಲ್ಲಿ ಯುವತಿಯ ಶವ ಪತ್ತೆಯಾಗಿದ್ದು, ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ದಾವಣಗೆರೆ ತಾಲೂಕಿನ ಕಕ್ಕರಗೊಳ್ಳ ಗ್ರಾಮದ ನಿವಾಸಿಯಾದ ರಂಜಿತಾ (೨೩) ಮೃತಪಟ್ಟಿರುವ ಯುವತಿ ಎಂದು ಗುರುತಿಸಲಾಗಿದೆ. ಯುವತಿಯ ಶವ ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಕೆಲಸಕ್ಕೆಂದು ಹೋಗಿದ್ದ ಈಕೆ ಕೆಲಸ ಮುಗಿಸಿಕೊಂಡು ವಾಪಸ್ ಮನೆಗೆ ಬಂದಿರಲಿಲ್ಲ. ಇಂದು ಶವವಾಗಿ ರಂಜಿತಾ ಪತ್ತೆಯಾಗಿದ್ದಾಳೆ.

ಗಾಂಧಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಯುವತಿಯನ್ನು ಯಾರೋ ಅತ್ಯಾಚಾರ ಮಾಡಿ ಜಮೀನಿನಲ್ಲಿಯೇ ಕೊಲೆ ಮಾಡಿ ಹೋಗಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ. ತನಿಖೆ ಮುಂದುವರಿದಿದೆ.

More

ಮಡಿಕೇರಿ: ನಗರದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿಸಿದೆ. ಶಿಕ್ಷಕಿಯನ್ನು ಕೊಂದ ವ್ಯಕ್ತಿಯೋರ್ವ...

ಮಂಗಳೂರು: ಕರಾವಳಿಯಲ್ಲಿ ಮುಂಗಾರು ಮಳೆ ಆರಂಭವಾಗಿದೆ. ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಉಂಟಾದ...


ಮಂಗಳೂರು; ನಗರದ ರೌಡಿಶೀಟರ್ ಒಬ್ಬನ ಮೇಲೆ ನಗರದ ಪಚ್ಚನಾಡಿ ಎಂಬಲ್ಲಿ ಪೊಲೀಸರು...

ಮಂಗಳೂರು: ಬಿಜೆಪಿಯ ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿ ಸಂಘದಿಂದ ಬಂದು ಚತುರ ಸಂಘಟಕ,...


ಬೆಂಗಳೂರು: ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗುವುದಂತೂ ಗ್ಯಾರಂಟಿ ಹಾಗಾದರೆ ರೇವಣ್ಣ ಆವೇಶದಲ್ಲಿ...

ಉಡುಪಿ: ಉಡುಪಿಯ ಮಲ್ಪೆ ಬಂದರಿನಿಂದ ಏಳು ಮಂದಿ ಮೀನುಗಾರರು ಬೋಟ್ ಸಮೇತ...


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಾಡಂಚಿನಲ್ಲಿ ಕಾಡುಕೋಣಗಳ ಹಾವಳಿ ಹೆಚ್ಚಿದೆ. ಕಾಡುಕೋಣಗಳ...

ಪುಂಜಾಲಕಟ್ಟೆ: ಕಾಡಿನಿಂದ ಊರಿಗೆ ಬಂದ ಕಾಡುಕೋಣವೊಂದು ಗೋಬರ್‌ ಗ್ಯಾಸ್‌ ಗುಂಡಿಯೊಳಗೆ ಬಿದ್ದ ಘಟನೆ...


Copyright 2019 www.policevarthe.com | All Right Reserved
error: Content is protected !!