Sunday, June 16 , 2019 4:12 AM

ಕ್ರೈಂ












ಬೆಂಗಳೂರು: ಭಾರಿ ಹಗರಣ ಗುಮಾನಿ ಐದು ಕಡೆ ಎಸಿಬಿ ದಾಳಿ



148

ಬೆಂಗಳೂರು: ನಗರದಲ್ಲಿ ಶನಿವಾರ ಬೆಳಿಗ್ಗೆ ಐದು ಕಡೆ ಎಸಿಬಿ ದಾಳಿ ನಡೆದಿದೆ. ಅಭಿವೃದ್ಧಿ ಹಕ್ಕು ವರ್ಗಾವಣೆ (ಟಿಡಿಆರ್‌) ಹಗರಣಕ್ಕೆ ಸಂಬಂಧಪಟ್ಟಂತೆ ಈ ದಾಳಿ ನಡೆದಿದೆ ಎನ್ನಲಾಗಿದೆ. ಸರ್ಕಾರಕ್ಕೆ ಹಣ ವಂಚಿಸಿದ ಗುಮಾನಿಯ ಮೇಲೆ ರತನ್ ಲಾಲ್, ಅಮಿತ್ ಬೋಳಾರ್, ಕೆ ಗೌತಮ್, ಮುನಿರಾಜಪ್ಪ ಎಂಬುವರ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆದಿದೆ.

ಬಿಬಿಎಂಪಿ ಹಾಗೂ ಬಿಡಿಎಯಿಂದ ವಾಲ್ ಮಾರ್ಕ್ ಕಂಪನಿ ಅಕ್ರಮವಾಗಿ ಟಿಡಿಆರ್ ಪಡೆದಿತ್ತು ಎನ್ನಲಾಗಿದೆ. ಹೀಗಾಗಿ ವಾಲ್ ಮಾರ್ಕ್ ಕಂಪನಿ ಮಾಲೀಕ ರತನ್ ಲಾಲ್ ಕಚೇರಿ ಹಾಗೂ ನಿವಾಸಗಳ ಮೇಲೆ ದಾಳಿ ನಡೆಸಲಾಗಿದೆ. ಎಸ್‌ಪಿ, ಎಸಿಪಿ ಮತ್ತು ಐದು ಡಿವೈಎಸ್‌ಪಿಗಳ ತಂಡ ಈ ದಾಳಿ ನಡೆಸಿದೆ. ಇಂದಿರಾನಗರ, ಕೆಆರ್ ಪುರ ಹಾಗೂ ಹೆಚ್ಎಎಲ್ ನಲ್ಲಿ, ವಾಲ್ ಮಾರ್ಕ್ ಕಂಪನಿ ಸೇರಿದಂತೆ ಒಟ್ಟು ಐದು ಕಂಪನಿಗಳ ಮೇಲೆ ದಾಳಿ ನಡೆದಿದೆ. ರೆಸಿಡೆನ್ಸಿ ರಸ್ತೆಯಲ್ಲಿ ರತನ್ ಲಾಲ್ ನಿವಾಸ, ಹಾಗೂ ಎಚ್ಎಎಲ್ ಬಳಿಯಿರುವ ಅವರ ಕಚೇರಿ ಮೇಲೆ ಎಸಿಬಿ ದಾಳಿ ನಡೆಸಿದೆ.

More

ಮಡಿಕೇರಿ: ನಗರದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿಸಿದೆ. ಶಿಕ್ಷಕಿಯನ್ನು ಕೊಂದ ವ್ಯಕ್ತಿಯೋರ್ವ...

ಮಂಗಳೂರು: ಕರಾವಳಿಯಲ್ಲಿ ಮುಂಗಾರು ಮಳೆ ಆರಂಭವಾಗಿದೆ. ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಉಂಟಾದ...


ಮಂಗಳೂರು; ನಗರದ ರೌಡಿಶೀಟರ್ ಒಬ್ಬನ ಮೇಲೆ ನಗರದ ಪಚ್ಚನಾಡಿ ಎಂಬಲ್ಲಿ ಪೊಲೀಸರು...

ಮಂಗಳೂರು: ಬಿಜೆಪಿಯ ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿ ಸಂಘದಿಂದ ಬಂದು ಚತುರ ಸಂಘಟಕ,...


ಬೆಂಗಳೂರು: ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗುವುದಂತೂ ಗ್ಯಾರಂಟಿ ಹಾಗಾದರೆ ರೇವಣ್ಣ ಆವೇಶದಲ್ಲಿ...

ಉಡುಪಿ: ಉಡುಪಿಯ ಮಲ್ಪೆ ಬಂದರಿನಿಂದ ಏಳು ಮಂದಿ ಮೀನುಗಾರರು ಬೋಟ್ ಸಮೇತ...


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಾಡಂಚಿನಲ್ಲಿ ಕಾಡುಕೋಣಗಳ ಹಾವಳಿ ಹೆಚ್ಚಿದೆ. ಕಾಡುಕೋಣಗಳ...

ಪುಂಜಾಲಕಟ್ಟೆ: ಕಾಡಿನಿಂದ ಊರಿಗೆ ಬಂದ ಕಾಡುಕೋಣವೊಂದು ಗೋಬರ್‌ ಗ್ಯಾಸ್‌ ಗುಂಡಿಯೊಳಗೆ ಬಿದ್ದ ಘಟನೆ...


Copyright 2019 www.policevarthe.com | All Right Reserved
error: Content is protected !!