Sunday, June 16 , 2019 5:14 AM

ಕ್ರೈಂ












ರಸ್ತೆ ಕುಸಿತಕ್ಕೆ ಶಾಶ್ವತ ಪರಿಹಾರ, ಮಳೆಗಾಲಕ್ಕೂ ಮುನ್ನ ಶಿರಾಡಿಘಾಟ್ ಬಂದ್?!



182

ಮಂಗಳೂರು: ಕಡಲ ತಡಿಯ ನಗರ ಮಂಗಳೂರು ಹಾಗು ರಾಜಧಾನಿ ಬೆಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿ ಘಾಟ್ ರಸ್ತೆ ಮತ್ತೆ ಬಂದ್ ಆಗುವ ಎಲ್ಲಾ ಲಕ್ಷಣಗಳು ಗೋಚರಿಸತೊಡಗಿದೆ. ಈ ಕರಿತು ರಾಜ್ಯ ಸರಕಾರ ಚಿಂತನೆ ನಡೆಸುತ್ತಿದೆ ಎಂದು ಹೇಳಲಾಗಿದೆ. ಕಳೆದ ಬಾರಿಸುರಿದ ಮಹಾ ಮಳೆಗೆ ಶಿರಾಡಿ ಘಾಟ್ ಪ್ರದೇಶದ ರಸ್ತೆಯ 12 ಕಡೆಗಳಲ್ಲಿ ಭೂ ಕುಸಿತ ಉಂಟಾಗಿ ರಸ್ತೆ ಸಂಪೂರ್ಣ ಹದಗೆಟ್ಟತ್ತು. ಆದರೆ ಕಳೆದ ಜೂನ್ ತಿಂಗಳಿನಲ್ಲಿ ರಸ್ತೆಯ ಸ್ಥಿತಿ ಹೇಗಿತ್ತೋ, ಅದೇ ಸ್ಥಿತಿ ಇಂದಿಗೂ ಶಿರಾಡಿ ಘಾಟ್ ನಲ್ಲಿ ಮುಂದುವರೆದಿದೆ.

ಜನಪ್ರತಿನಿಧಿಗಳಿಗೆ ಹಾಗೂ ಅಧಿಕಾರಿಗಳಿಗೆ ಚಿನ್ನದ ಮೊಟ್ಟೆ ಇಡುವ ಕೋಳಿಯಂತಿರುವ ಶಿರಾಡಿ ಘಾಟ್ ರಸ್ತೆಯ ಸಮಸ್ಯೆಗೆ ಒಂದು ವೇಳೆ ಶಾಶ್ವತ ಪರಿಹಾರ ದೊರೆತಲ್ಲಿ, ಇತರ ವ್ಯವಹಾರಕ್ಕೆ ಪೆಟ್ಟು ಬೀಳಲಿದೆ ಎನ್ನುವ ದೂರಾಲೋಚನೆಯೇ ಈ ಕಾಮಗಾರಿಗಳ ವಿಳಂಬಕ್ಕೆ ಕಾರಣ ಎನ್ನುವ ಮಾತೂ ಕೇಳಿ ಬರುತ್ತಿವೆ.

ರಸ್ತೆ ದುರಸ್ತಿಗೆ ಲೋಕೋಪಯೋಗಿ ಇಲಾಖೆ ಈ ವರೆಗೂ ಅಂದಾಜು ಪಟ್ಟಿ ಸಿದ್ಧಗೊಳಿಸಿಲ್ಲ. ಅಲ್ಲದೆ ರಸ್ತೆಯ ದುರಸ್ಥಿಗೆ ರಾಜ್ಯ ಸರಕಾರದ ಹಣದ ಬೇಡಿಕೆಯನ್ನು ಕೇಂದ್ರ ಸರಕಾರ ತಿರಸ್ಕರಿಸಿದ ಹಿನ್ನೆಲೆಯಲ್ಲಿ ಘಾಟ್ ರಸ್ತೆಯ ದುರಸ್ಥಿ ಕಾಮಗಾರಿ ನಡೆದೇ ಇಲ್ಲ. ಇದೀಗ ಮಳೆಗಾಲ ಸಮೀಪಿಸುತ್ತಿದ್ದಂತೆ ರಾಜ್ಯ ಲೋಕೋಪಯೋಗಿ ಇಲಾಖೆ ತರಾತುರಿಯಲ್ಲಿ ಅಂದಾಜು ಪಟ್ಟಿ ಸಿದ್ಧಪಡಿಸಿ ಮತ್ತೆ ಮಳೆಗಾಲದಲ್ಲಿ ಘಾಟ್ ರಸ್ತೆಯನ್ನು ಬಂದ್ ಮಾಡುವ ಲೆಕ್ಕಾಚಾರದಲ್ಲಿದೆ.ಈ ರಸ್ತೆಯ ಅಭಿವೃದ್ಧಿಗಾಗಿ ನೂರಾರು ಕೋಟಿ ರೂಪಾಯಿಗಳನ್ನು ಪ್ರತಿವರ್ಷವೂ ಸರಕಾರವು ವಿನಿಯೋಗಿಸುತ್ತಿದ್ದರೂ, ಇಲ್ಲಿನ ಸಮಸ್ಯೆಗೆ ಮಾತ್ರ ಮುಕ್ತಿ ದೊರೆತಂತೆ ಕಾಣುತ್ತಿಲ್ಲ.

More

ಮಡಿಕೇರಿ: ನಗರದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿಸಿದೆ. ಶಿಕ್ಷಕಿಯನ್ನು ಕೊಂದ ವ್ಯಕ್ತಿಯೋರ್ವ...

ಮಂಗಳೂರು: ಕರಾವಳಿಯಲ್ಲಿ ಮುಂಗಾರು ಮಳೆ ಆರಂಭವಾಗಿದೆ. ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಉಂಟಾದ...


ಮಂಗಳೂರು; ನಗರದ ರೌಡಿಶೀಟರ್ ಒಬ್ಬನ ಮೇಲೆ ನಗರದ ಪಚ್ಚನಾಡಿ ಎಂಬಲ್ಲಿ ಪೊಲೀಸರು...

ಮಂಗಳೂರು: ಬಿಜೆಪಿಯ ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿ ಸಂಘದಿಂದ ಬಂದು ಚತುರ ಸಂಘಟಕ,...


ಬೆಂಗಳೂರು: ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗುವುದಂತೂ ಗ್ಯಾರಂಟಿ ಹಾಗಾದರೆ ರೇವಣ್ಣ ಆವೇಶದಲ್ಲಿ...

ಉಡುಪಿ: ಉಡುಪಿಯ ಮಲ್ಪೆ ಬಂದರಿನಿಂದ ಏಳು ಮಂದಿ ಮೀನುಗಾರರು ಬೋಟ್ ಸಮೇತ...


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಾಡಂಚಿನಲ್ಲಿ ಕಾಡುಕೋಣಗಳ ಹಾವಳಿ ಹೆಚ್ಚಿದೆ. ಕಾಡುಕೋಣಗಳ...

ಪುಂಜಾಲಕಟ್ಟೆ: ಕಾಡಿನಿಂದ ಊರಿಗೆ ಬಂದ ಕಾಡುಕೋಣವೊಂದು ಗೋಬರ್‌ ಗ್ಯಾಸ್‌ ಗುಂಡಿಯೊಳಗೆ ಬಿದ್ದ ಘಟನೆ...


Copyright 2019 www.policevarthe.com | All Right Reserved
error: Content is protected !!