Sunday, June 16 , 2019 4:01 AM

ಕ್ರೈಂ












ಲೋಕಸಭೆ ಮತ ಎಣಿಕೆಗೆ ಸಿದ್ಧತೆ ಆರಂಭ



119

ಬೆಂಗಳೂರು: ಈಗಾಗಲೇ ಬೆಂಗಳೂರಿನ ಮೂರು ಲೋಕಸಭೆ ಕ್ಷೇತ್ರಗಳ ಮತ ಎಣಿಕೆಗೆ ಸಿದ್ಧತೆ ಆರಂಭಿಸಿದ್ದು, ಬೆಂಗಳೂರಿನ ಮೂರು ಕೇಂದ್ರಗಳಲ್ಲಿ ವಿಧಾನಸಭಾ ಕ್ಷೇತ್ರವಾರು ಪ್ರತ್ಯೇಕವಾಗಿ ಮತ ಎಣಿಕೆ ನಡೆಯಲಿದೆ ಎಂದು ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿ ಮಂಜುನಾಥ್‌ ಪ್ರಸಾದ್‌ ತಿಳಿಸಿದ್ದಾರೆ.

ಚುನಾವಣಾಧಿಕಾರಿಗಳು ಹಾಗೂ ನಗರ ಪೊಲೀಸ್‌ ಆಯುಕ್ತ ಟಿ.ಸುನೀಲ್‌ ಕುಮಾರ್‌ ಜಂಟಿ ನೇತೃತ್ವದಲ್ಲಿ ಶನಿವಾರ ನಡೆದ ಬೆಂಗಳೂರಿನ ಮೂರು ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಕೇಂದ್ರಗಳ ತಪಾಸಣೆ ಕಾರ್ಯದ ಬಳಿಕ ಅವರು ಮಾತನಾಡಿದರು. ಮತ ಎಣಿಕೆಗೆ ಈಗಾಗಲೇ ಸಿಬ್ಬಂದಿ ನಿಯೋಜಿಸಿದ್ದು, ಮೇ 16ರಂದು ಮೊದಲ ಹಂತದಲ್ಲಿ ಹಾಗೂ ಮೇ 21ರಂದು ಎರಡನೇ ಹಂತದಲ್ಲಿ ಅವರಿಗೆ ತರಬೇತಿ ನೀಡಲಾಗುತ್ತಿದೆ. ಯಾರನ್ನು ಯಾವ ಕ್ಷೇತ್ರದ ಮತ ಎಣಿಕೆ ಕೇಂದ್ರಕ್ಕೆ ನಿಯೋಜಿಸಲಾಗಿದೆ ಎಂದು ಮೇ 22ರಂದು ತಿಳಿಸಲಾಗುತ್ತದೆ. ಮೇ 23ರಂದು ಯಾವ ವಿಧಾಸಭಾ ಕ್ಷೇತ್ರದ ಕೊಠಡಿಗೆ ನಿಯೋಜನೆಗೊಂಡಿದ್ದಾರೆ ಎಂಬ ಮಾಹಿತಿ ನೀಡಲಾಗುತ್ತದೆ ಎಂದು ತಿಳಿಸಿದರು.

ನಗರದ ಮೂರು ಲೋಕಸಭಾ ಕ್ಷೇತ್ರಗಳಲ್ಲಿ ತಲಾ 8 ವಿಧಾನಸಭಾ ಕ್ಷೇತ್ರಗಳಿವೆ. ಅಲ್ಲಿನ ಮತಯಂತ್ರಗಳನ್ನು ಪ್ರತ್ಯೇಕವಾಗಿ ಇಡಲಾಗಿದ್ದು, ಪ್ರತ್ಯೇಕವಾಗಿಯೇ ಮತ ಎಣಿಕೆ ನಡೆಯಲಿದೆ. ಮತಯಂತ್ರ ಇಟ್ಟಿರುವ ಸ್ಟ್ರಾಂಗ್‌ ರೂಂ ಪಕ್ಕದಲ್ಲೇ ಮತ ಎಣಿಕೆಗೆ ಕೊಠಡಿ ನಿಗದಿ ಮಾಡಲಾಗಿದೆ. ಪ್ರತಿ ಕೊಠಡಿಗೆ 15 ಟೇಬಲ್‌ಗ‌ಳನ್ನು ಹಾಕಲಾಗುತ್ತದೆ. ಕೊಠಡಿಗೆ ಒಬ್ಬ ಮತ ಎಣಿಕೆ ರಿಟರ್ನಿಂಗ್‌ ಅಧಿಕಾರಿ, ಒಬ್ಬ ಸಹಾಯಕ ರಿಟರ್ನಿಂಗ್‌ ಅಧಿಕಾರಿ ಹಾಗೂ ಸೂಕ್ಷ್ಮವೀಕ್ಷಕರಾಗಿ ಕೇಂದ್ರ ಸರ್ಕಾರದ ಒಬ್ಬ ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದಾರೆ ಎಂದರು.

More

ಮಡಿಕೇರಿ: ನಗರದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿಸಿದೆ. ಶಿಕ್ಷಕಿಯನ್ನು ಕೊಂದ ವ್ಯಕ್ತಿಯೋರ್ವ...

ಮಂಗಳೂರು: ಕರಾವಳಿಯಲ್ಲಿ ಮುಂಗಾರು ಮಳೆ ಆರಂಭವಾಗಿದೆ. ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಉಂಟಾದ...


ಮಂಗಳೂರು; ನಗರದ ರೌಡಿಶೀಟರ್ ಒಬ್ಬನ ಮೇಲೆ ನಗರದ ಪಚ್ಚನಾಡಿ ಎಂಬಲ್ಲಿ ಪೊಲೀಸರು...

ಮಂಗಳೂರು: ಬಿಜೆಪಿಯ ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿ ಸಂಘದಿಂದ ಬಂದು ಚತುರ ಸಂಘಟಕ,...


ಬೆಂಗಳೂರು: ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗುವುದಂತೂ ಗ್ಯಾರಂಟಿ ಹಾಗಾದರೆ ರೇವಣ್ಣ ಆವೇಶದಲ್ಲಿ...

ಉಡುಪಿ: ಉಡುಪಿಯ ಮಲ್ಪೆ ಬಂದರಿನಿಂದ ಏಳು ಮಂದಿ ಮೀನುಗಾರರು ಬೋಟ್ ಸಮೇತ...


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಾಡಂಚಿನಲ್ಲಿ ಕಾಡುಕೋಣಗಳ ಹಾವಳಿ ಹೆಚ್ಚಿದೆ. ಕಾಡುಕೋಣಗಳ...

ಪುಂಜಾಲಕಟ್ಟೆ: ಕಾಡಿನಿಂದ ಊರಿಗೆ ಬಂದ ಕಾಡುಕೋಣವೊಂದು ಗೋಬರ್‌ ಗ್ಯಾಸ್‌ ಗುಂಡಿಯೊಳಗೆ ಬಿದ್ದ ಘಟನೆ...


Copyright 2019 www.policevarthe.com | All Right Reserved
error: Content is protected !!