Sunday, June 16 , 2019 4:31 AM

ಕ್ರೈಂ












ದೇವಸ್ಥಾನದ ಕೊಳಕ್ಕೆ ಬಿದ್ದ ಕಾಡುಕೋಣವನ್ನು ರಕ್ಷಿಸಿದ ಅರಣ್ಯಾಧಿಕಾರಿಗಳು



131

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಾಡಂಚಿನಲ್ಲಿ ಕಾಡುಕೋಣಗಳ ಹಾವಳಿ ಹೆಚ್ಚಿದೆ. ಕಾಡುಕೋಣಗಳ ಹಿಂಡು ಕಾಡಂಚಿನ ಊರುಗಳಿಗೆ ನುಗ್ಗುತ್ತಿವೆ.ರಾತ್ರಿ ಹೊತ್ತಿನಲ್ಲಿ ಆ ಭಾಗದಲ್ಲಿ ಕಾಡುಕೋಣಗಳ ಓಡಾಟ ಹೆಚ್ಚಾಗಿದೆ. ಆದರೆ ಕಾಡುಕೋಣದ ಮರಿಯೊಂದು ದೇವಸ್ಥಾನದ ಕೊಳಕ್ಕೆ ಬಿದ್ದ ಘಟನೆ ಸುಳ್ಯದಲ್ಲಿ ನಡೆದಿದೆ. ಸುಳ್ಯ ತಾಲೂಕಿನ ಗುತ್ತಿಗಾರು ಸಮೀಪದ ವಳಲಂಬೆ ಮಹಾವಿಷ್ಣು ದೇವಸ್ಥಾನದ ಬಳಿ ಇರುವ ತೆರೆದ ಕೊಳಕ್ಕೆ ಕಾಡುಕೋಣ ಆಕಸ್ಮಿಕವಾಗಿ ಬಿದ್ದಿದೆ.

ಈ ವಿಚಾರ ತಿಳಿಯುತ್ತಿದ್ದಂತೆಯೇ ಗ್ರಾಮಸ್ಥರು ಕೊಳದ ಸುತ್ತ ಕಾಡುಕೋಣ ನೋಡಲು ಜಮಾಯಿಸಿದ್ದರು. ರಾತ್ರಿ ಹೊತ್ತಿನಲ್ಲಿ ಆ ಭಾಗದಲ್ಲಿ ಕಾಡುಕೋಣಗಳ ಹಿಂಡಿನ ಜೊತೆ ಸಾಗುವಾಗ ಆಕಸ್ಮಿಕವಾಗಿ ಕೊಳಕ್ಕೆ ಬಿದ್ದಿರಬಹುದು ಹೇಳಲಾಗಿದೆ.ಕೊಳಕ್ಕೆ ಕಾಡುಕೋಣ ಬಿದ್ದ ವಿಷಯವನ್ನು ಕೂಡಲೇ ಸ್ಥಳೀಯರು ಅರಣ್ಯಾಧಿಕಾರಿಗಳಿಗೆ ತಿಳಿಸಿದ್ದಾರೆ. ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಕಾಡುಕೋಣವನ್ನು ಕೊಳದಿಂದ ಮೇಲೆಕ್ಕೆತ್ತಿದ್ದಾರೆ.

More

ಮಡಿಕೇರಿ: ನಗರದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿಸಿದೆ. ಶಿಕ್ಷಕಿಯನ್ನು ಕೊಂದ ವ್ಯಕ್ತಿಯೋರ್ವ...

ಮಂಗಳೂರು: ಕರಾವಳಿಯಲ್ಲಿ ಮುಂಗಾರು ಮಳೆ ಆರಂಭವಾಗಿದೆ. ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಉಂಟಾದ...


ಮಂಗಳೂರು; ನಗರದ ರೌಡಿಶೀಟರ್ ಒಬ್ಬನ ಮೇಲೆ ನಗರದ ಪಚ್ಚನಾಡಿ ಎಂಬಲ್ಲಿ ಪೊಲೀಸರು...

ಮಂಗಳೂರು: ಬಿಜೆಪಿಯ ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿ ಸಂಘದಿಂದ ಬಂದು ಚತುರ ಸಂಘಟಕ,...


ಬೆಂಗಳೂರು: ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗುವುದಂತೂ ಗ್ಯಾರಂಟಿ ಹಾಗಾದರೆ ರೇವಣ್ಣ ಆವೇಶದಲ್ಲಿ...

ಉಡುಪಿ: ಉಡುಪಿಯ ಮಲ್ಪೆ ಬಂದರಿನಿಂದ ಏಳು ಮಂದಿ ಮೀನುಗಾರರು ಬೋಟ್ ಸಮೇತ...


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಾಡಂಚಿನಲ್ಲಿ ಕಾಡುಕೋಣಗಳ ಹಾವಳಿ ಹೆಚ್ಚಿದೆ. ಕಾಡುಕೋಣಗಳ...

ಪುಂಜಾಲಕಟ್ಟೆ: ಕಾಡಿನಿಂದ ಊರಿಗೆ ಬಂದ ಕಾಡುಕೋಣವೊಂದು ಗೋಬರ್‌ ಗ್ಯಾಸ್‌ ಗುಂಡಿಯೊಳಗೆ ಬಿದ್ದ ಘಟನೆ...


Copyright 2019 www.policevarthe.com | All Right Reserved
error: Content is protected !!