Sunday, June 16 , 2019 4:18 AM

ಕ್ರೈಂ












ಮೋದಿ ಮತ್ತೆ ಪ್ರಧಾನಿಯಾಗುವುದಂತೂ ಸತ್ಯ, ರೇವಣ್ಣ ರಾಜಕೀಯ ನಿವೃತ್ತಿ?



102

ಬೆಂಗಳೂರು: ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗುವುದಂತೂ ಗ್ಯಾರಂಟಿ ಹಾಗಾದರೆ ರೇವಣ್ಣ ಆವೇಶದಲ್ಲಿ ನೀಡಿದ್ದ ಹೇಳಿಕೆಯನ್ನು ಉಳಿಸಿಕೊಳ್ಳುತ್ತಾರಾ ಎನ್ನುವುದನ್ನು ಕಾದು ನೋಡಬೇಕಿದೆ. ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಲು ಸಾಧ್ಯವೇ ಇಲ್ಲ ಒಂದೊಮ್ಮೆ ಗೆದ್ದರೆ ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ ಎಂದು ಹೇಳಿಕೆ ನೀಡಿದ್ದರು, ಈಗ ಅವರ ಹೇಳಿಕೆ ಮೇಲೆಯೇ ಎಲ್ಲರ ಚಿತ್ತವಿದೆ.

ಎಚ್‌ಡಿ ರೇವಣ್ಣ ನೀಡಿದ್ದ ಹೇಳಿಕೆಯನ್ನು ಉಳಿಸಿಕೊಳ್ಳುತ್ತಾರೆಯೇ ಅಥವಾ ಅವರ ತಂದೆಯಂತೆ ಹೇಳಿಕೆಯಿಂದ ಜಾರಿಕೊಳ್ಳುತ್ತಾರೆಯೇ ಎನ್ನುವುದು ಎಲ್ಲರ ಕುತೂಹಲವಾಗಿದೆ. ಬಿಜೆಪಿಯು ಕರ್ನಾಟಕದಲ್ಲಿ 25 ಸ್ಥಾನವನ್ನು ಗಳಿಸಿದ್ದು  ಕಾಂಗ್ರೆಸ್ ಕರ್ನಾಟಕದಲ್ಲಿ ಅಸ್ತಿತ್ವ ಉಳಿಸಿಕೊಳ್ಳುವಲ್ಲಿ ಕಾಂಗ್ರೆಸ್ ಸೋತಿದೆ. ಒಂದೆಡೆ ಪ್ರಜ್ವಲ್ ರೇವಣ್ಣ ಗೆಲುವಿನ ಸಂಭ್ರಮ ಮನೆ ಮಾಡಿದ್ದರೆ, ಇನ್ನೊಂದೆಡೆ ಎಚ್‌ಡಿ ದೇವೇಗೌಡರು ತುಮಕೂರಿನಲ್ಲಿ ಸೋತಿದ್ದಾರೆ, ಇನ್ನೊಂದೆಡೆ ಮಂಡ್ಯದಲ್ಲಿ ಸುಮಲತಾ ಅಂಬರೀಶ್ ಎದುರು ನಿಖಿಲ್ ಕೂಡ ಸೋಲು ಅನುಭವಿಸಿದ್ದಾರೆ.

2014ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿಯೂ ಇದೇ ರೀತಿ ರೇವಣ್ಣ ಅವರ ತಂದೆ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಅವರು ಹೇಳಿಕೆ ನೀಡಿದ್ದರು. ಒಂದೊಮ್ಮೆ ಮೋದಿ ಪ್ರಧಾನಿಯಾದರೆ ನಾನು ರಾಜಕೀಯ ನಿವೃತ್ತಿ ಪಡೆದು ದೇಶಬಿಡುತ್ತೇನೆ ಎಂದು ದೇವೇಗೌಡರು ಘೋಷಿಸಿದ್ದರು. ಆದರೆ ಮೋದಿ ಭೇಟಿ ಸಂದರ್ಭದಲ್ಲಿ ಈ ವಿಚಾರವೂ ಕೂಡ ಚರ್ಚೆಗೆ ಬಂದಿತ್ತು ಎನ್ನಲಾಗಿದೆ.

ನಿಮ್ಮಂಥ ಹಿರಿಯ ಸಂಸದೀಯರು ರಾಜಕೀಯ ನಿವೃತ್ತಿ ಪಡೆಯುವುದು ಸರಿಯಲ್ಲ, ಸಂತಸ್‌ನಲ್ಲಿ ನಿಮ್ಮಂಥ ಹಿರಿಯ ಸಂಸದರ ಅಗತ್ಯವಿದೆ ಎಂದು ಮೋದಿ ಹೇಳಿದ್ದ ಹಿನ್ನೆಲೆಯಲ್ಲಿ ನಿಲುವು ಬದಲಿಸಿದ್ದಾಗಿ ದೇವೇಗೌಡರು ಹೇಳಿಕೊಂಡಿದ್ದರು. ಈಗ ರೇವಣ್ಣ ಯಾವ ರೀತಿ ಸಬೂಬು ನೀಡುತ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ. ಮೋದಿ ಪ್ರಧಾನಿಯಾಗಿ ಆಯ್ಕೆಯಾದರೆ ಬಿಜೆಪಿ ನಾಯಕರು ಖಡಾಖಂಡಿತವಾಗಿ ರೇವಣ್ಣ ಅವರ ರಾಜಕೀಯ ನಿವೃತ್ತಿಯನ್ನು ಕೇಳಿ ಲೇವಡಿ ಮಾಡುವುದಂತೂ ಸತ್ಯವಾಗಿದೆ. ಅದಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿಯೂ ಸಾರ್ವಜನಿಕರೂ ಕೂಡ ಈ ಬಗ್ಗೆ ಚರ್ಚೆ ನಡೆಸಬಹುದು. ರೇವಣ್ಣ ಇದಕ್ಕೆ ಹೇಗೆ ಪ್ರತಿಕ್ರಿಯಿಸುತ್ತಾರೆ ಎನ್ನುವುದನ್ನು ನೋಡಬೇಕಿದೆ.

More

ಮಡಿಕೇರಿ: ನಗರದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿಸಿದೆ. ಶಿಕ್ಷಕಿಯನ್ನು ಕೊಂದ ವ್ಯಕ್ತಿಯೋರ್ವ...

ಮಂಗಳೂರು: ಕರಾವಳಿಯಲ್ಲಿ ಮುಂಗಾರು ಮಳೆ ಆರಂಭವಾಗಿದೆ. ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಉಂಟಾದ...


ಮಂಗಳೂರು; ನಗರದ ರೌಡಿಶೀಟರ್ ಒಬ್ಬನ ಮೇಲೆ ನಗರದ ಪಚ್ಚನಾಡಿ ಎಂಬಲ್ಲಿ ಪೊಲೀಸರು...

ಮಂಗಳೂರು: ಬಿಜೆಪಿಯ ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿ ಸಂಘದಿಂದ ಬಂದು ಚತುರ ಸಂಘಟಕ,...


ಬೆಂಗಳೂರು: ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗುವುದಂತೂ ಗ್ಯಾರಂಟಿ ಹಾಗಾದರೆ ರೇವಣ್ಣ ಆವೇಶದಲ್ಲಿ...

ಉಡುಪಿ: ಉಡುಪಿಯ ಮಲ್ಪೆ ಬಂದರಿನಿಂದ ಏಳು ಮಂದಿ ಮೀನುಗಾರರು ಬೋಟ್ ಸಮೇತ...


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಾಡಂಚಿನಲ್ಲಿ ಕಾಡುಕೋಣಗಳ ಹಾವಳಿ ಹೆಚ್ಚಿದೆ. ಕಾಡುಕೋಣಗಳ...

ಪುಂಜಾಲಕಟ್ಟೆ: ಕಾಡಿನಿಂದ ಊರಿಗೆ ಬಂದ ಕಾಡುಕೋಣವೊಂದು ಗೋಬರ್‌ ಗ್ಯಾಸ್‌ ಗುಂಡಿಯೊಳಗೆ ಬಿದ್ದ ಘಟನೆ...


Copyright 2019 www.policevarthe.com | All Right Reserved
error: Content is protected !!