Sunday, September 15 , 2019 9:30 PM

ಕ್ರೈಂ












ಕೇಂದ್ರ ಗುಪ್ತಚರ ಇಲಾಖೆ ವರದಿ ಹಿನ್ನಲೆ; ಬೆಂಗಳೂರು ನಗರದಲ್ಲಿ ಪೊಲೀಸ್ ಭದ್ರತೆ ಹೆಚ್ಚಳ, ಹೈ ಅಲರ್ಟ್‌



1159

ಬೆಂಗಳೂರು: ಕೇಂದ್ರ ಗುಪ್ತಚರ ಇಲಾಖೆ ವರದಿ ಹಿನ್ನಲೆಯಲ್ಲಿ ಬೆಂಗಳೂರು ನಗರದಲ್ಲಿ ಪೊಲೀಸ್ ಭದ್ರತೆ ಹೆಚ್ಚಳ ಮಾಡಲಾಗಿದೆ. ದೇಶದ ನಾಲ್ಕು ನಗರಗಳ ಮೇಲೆ ದಾಳಿ ನಡೆಯಬಹುದು ಎಂದು ವರದಿಯಲ್ಲಿ ಎಚ್ಚರಿಕೆ ನೀಡಲಾಗಿದೆ. ಬೆಂಗಳೂರು, ದೆಹಲಿ, ಮುಂಬೈ ಮತ್ತು ಹೈದರಾಬಾದ್ ನಗರಗಳ ಮೇಲೆ ದಾಳಿ ನಡೆಯುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ವರದಿ ನೀಡಿದೆ. ಈ ಹಿನ್ನಲೆಯಲ್ಲಿ ಶುಕ್ರವಾರ ಸಂಜೆಯಿಂದಲೇ ಭದ್ರತೆ ಹೆಚ್ಚಳ ಮಾಡಲಾಗಿದೆ.

ಕೇಂದ್ರ ಗೃಹ ಇಲಾಖೆ ಬೆಂಗಳೂರು ನಗರ ಪೊಲೀಸರಿಗೆ ಗುಪ್ತಚರ ಇಲಾಖೆ ವರದಿ ಅನ್ವಯ ಕ್ರಮ ಕೈಗೊಳ್ಳಲು ಸೂಚನೆ ನೀಡಿತ್ತು. ಆದ್ದರಿಂದ, ತಕ್ಷಣದಿಂದಲೇ ನಗರದಲ್ಲಿ ಭದ್ರತೆ ಹೆಚ್ಚಳ ಮಾಡಲು ಪೊಲೀಸ್ ಆಯುಕ್ತರು ಸೂಚನೆ ನೀಡಿದ್ದಾರೆ. ನಗರದ ಪ್ರಮುಖ ಪ್ರದೇಶಗಳಾದ ಮೆಟ್ರೋ ನಿಲ್ದಾಣ, ಮಾಲ್, ವಿಧಾನಸೌಧ, ಹೈಕೋರ್ಟ್, ಬಸ್ ನಿಲ್ದಾಣ, ವಿಕಾಸಸೌಧ ಸೇರಿದಂತೆ ಜನನಿಬೀಡ ಮತ್ತು ಸೂಕ್ಷ್ಮ ಪ್ರದೇಶದಲ್ಲಿ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ. ಹಲವು ಪ್ರದೇಶಗಳಲ್ಲಿ ಚೆಕ್ ಪೋಸ್ಟ್ ನಿರ್ಮಾಣ ಮಾಡಬೇಕು. ಜಂಟಿ ಆಯುಕ್ತರ ನೇತೃತ್ವದಲ್ಲಿ ಪೊಲೀಸರ ತಂಡ ಸನ್ನದ್ಧವಾಗಿರಬೇಕು ಎಂದು ಪೊಲೀಸ್ ಆಯುಕ್ತರು ಆದೇಶ ನೀಡಿದ್ದಾರೆ.

More

ಬಂಟ್ವಾಳ: ಪಾಣೆಮಂಗಳೂರು ಗ್ರಾಮದ ನೇತ್ರಾವತಿ ನದಿ ತೀರದಲ್ಲಿ ಹಲವು ವರ್ಷಗಳಿಂದ ಅಕ್ರಮವಾಗಿ...

ಮಂಗಳೂರು: ರಾಜ್ಯಾದ್ಯಂತ ಭಾರಿ ಸದ್ದು ಮಾಡಿದ್ದ ಗಿರಿಗಿಟ್ ತುಳು ಸಿನಿಮಾಕ್ಕೆ ಇದೀಗ ಕಂಟಕ...


ಮಂಗಳೂರು; ನಗರದ ಪಡೀಲ್ ಕೊಡಕ್ಕಲ್ ಎಂಬಲ್ಲಿ ನಿನ್ನೆ ರಾತ್ರಿ ಕಂಪೌಂಡ್ ಕುಸಿದು...

ಮಂಗಳೂರು: ಕರಾವಳಿಯಲ್ಲಿ ಸುರಿಯುತ್ತಿರುವ ನಿರಂತರ ಮಳೆಗೆ ಪಡೀಲ್‌ನ ಮನೆಯೊಂದರ ಆವರಣ ಗೋಡೆ...


ಮಂಗಳೂರು: ಕಳೆದ ಎರಡು ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಯ ಜನಸ್ನೇಹಿ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ...

ಬೆಂಗಳೂರು: ನನ್ನ ಹೆಸರಿನಲ್ಲಿ ನಕಲಿ ಫೇಸ್​ಬುಕ್​ ಖಾತೆಗಳನ್ನು ತೆರೆದು ಅವಹೇಳನಕಾರಿ ಪೋಸ್ಟ್​ಗಳನ್ನು ಹಾಕುತ್ತಿದ್ದಾರೆ...


ಮುಕ್ಕ : ಕಾರೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಡಿವೈಡರ್  ಹಾರಿ ಲಾರಿಗೆ ಡಿಕ್ಕಿ...

ಮಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯ ನೂತನ  ಜಿಲ್ಲಾಧಿಕಾರಿಯಾಗಿ ಸಿಂಧು ಬಿ. ರೂಪೇಶ್...


Copyright 2019 www.policevarthe.com | All Right Reserved
error: Content is protected !!