Sunday, September 15 , 2019 9:57 PM

ಕ್ರೈಂ












ಬೆಳ್ತಂಗಡಿಯಿಂದ ಪಾಕಿಸ್ಥಾನಕ್ಕೆ ಸ್ಯಾಟಲೈಟ್ ಕರೆ ಪ್ರಕರಣ!, ಇತಂಹ ಯಾವುದೇ ಘಟನೆ ನಡೆದಿಲ್ಲ; ಎಸ್ಪಿ ಲಕ್ಷ್ಮೀ ಪ್ರಸಾದ್ ಸ್ಪಷ್ಟನೆ



5603

ಮಂಗಳೂರು; ಬೆಳ್ತಂಗಡಿಯ ಪ್ರದೇಶವೊಂದರಿಂದ ಪಾಕಿಸ್ತಾನಕ್ಕೆ ಸ್ಯಾಟಲೈಟ್ ಕರೆ ಹೋಗಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಇತಂಹ ಯಾವುದೇ ಘಟನೆ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನಲ್ಲಿ  ನಡೆದಿಲ್ಲ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಲಕ್ಷ್ಮೀ ಪ್ರಸಾದ್ ಅವರು ಸ್ಪಷ್ಟನೆ ನೀಡಿದ್ದಾರೆ.

ಈ ಬಗ್ಗೆ Policevarthe.com ವೆಬ್ ಸೈಟ್ ಗೆ ಪ್ರತಿಕ್ರಿಯಿಸಿರುವ ಅವರು ಇತಂಹ ಯಾವುದೇ ಸ್ಯಾಟಲೈಟ್ ಸಂಬಂಧಿಸಿದ ಪೋನ್ ಕರೆಗಳು ಪಾಕಿಸ್ತಾನಕ್ಕೆ ಹೋಗಿರುವ ಬಗ್ಗೆ ಯಾವುದೇ ಮಾಹಿತಿ ಇಲ್ಲ ಹಾಗೂ ಈ ರೀತಿಯ ಘಟನೆ ನಡೆದಿಲ್ಲ. ಮಾತ್ರವಲ್ಲದೇ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ ಮತ್ತು ಸ್ಥಳೀಯ ಸಿಸಿಟಿವಿಗಳನ್ನು ಪರಿಶೀಲನೆ ನಡೆಸಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ ಎಂಬ ಮಾಹಿತಿ ಕೂಡ ಹರಿದಾಡುತ್ತಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಹಾಗೂ ಸಿಸಿಟಿವಿ ಪರಿಶೀಲನೆ ನಡೆಸಿದ್ದು ಕಳ್ಳತನ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಿರುವುದು. ಜಿಲ್ಲೆಯ ಜನತೆ ಯಾವುದೇ ಇತಂಹ ಮಾಹಿತಿಗಳಿಂದಾಗಿ ಆತಂಕ ಪಡುವ ಅಗತ್ಯವಿಲ್ಲ ಎಂದು ಎಸ್ಪಿ ಅವರು ತಿಳಿಸಿದ್ದಾರೆ.

ರಾಜ್ಯದಲ್ಲಿ ಭಯೋತ್ಪಾಕ ಕೃತ್ಯ ಸಂಬಂಧ ಹೈಅಲರ್ಟ್ ಘೋಷಣೆ ಬೆನ್ನಲ್ಲೇ, ದೆಹಲಿಯಲ್ಲಿ ಸೆರೆಸಿಕ್ಕ ಉಗ್ರನೊಬ್ಬ ಬೆಳ್ತಂಗಡಿಯಿಂದ ಪಾಕ್​​ಗೆ ಸ್ಯಾಟ್​​ಲೈಟ್ ಕರೆ ಹೋಗಿರುವ ಬಗ್ಗೆ ಬಾಯ್ಬಿಟ್ಟಿದ್ದಾನೆ ಎಂಬ ಸುದ್ದಿ ಹರಡಿತ್ತು. ಈ ಹಿನ್ನೆಲೆಯಲ್ಲಿ ಎನ್​​ಐಎ ಅಧಿಕಾರಿಗಳು ಕರಾವಳಿಗೆ ಬಂದು ತನಿಖೆ ಮಾಡುತ್ತಿದ್ದಾರೆ ಎಂದು ಹೇಳಲಾಗಿತ್ತು. ಅಂತಹ ಯಾವುದೇ ಘಟನೆ ಆಗಿಲ್ಲ. ರಾಷ್ಟ್ರೀಯ ತನಿಖಾ ತಂಡದ ಅಧಿಕಾರಿಗಳು ಜಿಲ್ಲೆಗೆ ಬಂದಿರುವ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ

More

ಬಂಟ್ವಾಳ: ಪಾಣೆಮಂಗಳೂರು ಗ್ರಾಮದ ನೇತ್ರಾವತಿ ನದಿ ತೀರದಲ್ಲಿ ಹಲವು ವರ್ಷಗಳಿಂದ ಅಕ್ರಮವಾಗಿ...

ಮಂಗಳೂರು: ರಾಜ್ಯಾದ್ಯಂತ ಭಾರಿ ಸದ್ದು ಮಾಡಿದ್ದ ಗಿರಿಗಿಟ್ ತುಳು ಸಿನಿಮಾಕ್ಕೆ ಇದೀಗ ಕಂಟಕ...


ಮಂಗಳೂರು; ನಗರದ ಪಡೀಲ್ ಕೊಡಕ್ಕಲ್ ಎಂಬಲ್ಲಿ ನಿನ್ನೆ ರಾತ್ರಿ ಕಂಪೌಂಡ್ ಕುಸಿದು...

ಮಂಗಳೂರು: ಕರಾವಳಿಯಲ್ಲಿ ಸುರಿಯುತ್ತಿರುವ ನಿರಂತರ ಮಳೆಗೆ ಪಡೀಲ್‌ನ ಮನೆಯೊಂದರ ಆವರಣ ಗೋಡೆ...


ಮಂಗಳೂರು: ಕಳೆದ ಎರಡು ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಯ ಜನಸ್ನೇಹಿ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ...

ಬೆಂಗಳೂರು: ನನ್ನ ಹೆಸರಿನಲ್ಲಿ ನಕಲಿ ಫೇಸ್​ಬುಕ್​ ಖಾತೆಗಳನ್ನು ತೆರೆದು ಅವಹೇಳನಕಾರಿ ಪೋಸ್ಟ್​ಗಳನ್ನು ಹಾಕುತ್ತಿದ್ದಾರೆ...


ಮುಕ್ಕ : ಕಾರೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಡಿವೈಡರ್  ಹಾರಿ ಲಾರಿಗೆ ಡಿಕ್ಕಿ...

ಮಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯ ನೂತನ  ಜಿಲ್ಲಾಧಿಕಾರಿಯಾಗಿ ಸಿಂಧು ಬಿ. ರೂಪೇಶ್...


Copyright 2019 www.policevarthe.com | All Right Reserved
error: Content is protected !!