Monday, July 6 , 2020 11:04 AM

ಕ್ರೈಂ












ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ; ಕರಾವಳಿಯಲ್ಲಿ ಎರಡು ದಿನಗಳ ಕಾಲ ಆರೆಂಜ್‌ ಅಲರ್ಟ್‌ ಘೋಷಣೆ



309

ಮಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಮಂಗಳವಾರದಂದು ಚಂಡಮಾರುತವಾಗಿ ಪರಿವರ್ತನೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ. ಹೀಗಾಗಿ ಕರಾವಳಿ ಭಾಗದಲ್ಲಿ ಎರಡು ದಿನಗಳ ಕಾಲ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ. ಇಂದು ಕರಾವಳಿ ಭಾಗದಲ್ಲಿ 115.6 ಮಿ.ಮೀ.ನಿಂದ 204.4 ಮಿ.ಮೀ.ಮಳೆಯಾಗಲಿದೆ, ಈ ವೇಳೆ ಗುಡುಗು ಮತ್ತು ಗಾಳಿ ಕೂಡ ಹೆಚ್ಚಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಹೀಗಾಗಿ ಮುನ್ನೆಚ್ಚರಿಕೆಯ ಕ್ರಮವಾಗಿ ಮೀನುಗಾರಿಕೆಗೆ ನಿಷೇಧ ಹೇರಲಾಗಿದೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಪ್ರಕೃತಿ ವಿಕೋಪವನ್ನು ಸಮರ್ಪಕವಾಗಿ ಎದುರಿಸಲು (ರಾಷ್ಟ್ರೀಯ ವಿಪತ್ತು ಪರಿಹಾರ ತಂಡ ಜೂ.4 ರಂದು) ಜಿಲ್ಲೆಗೆ ಆಗಮಿಸಲಿದೆ. ಕೇರಳಕ್ಕೆ ಮುಂಗಾರು ಜೂನ್ ಒಂದರಂದು ಪ್ರವೇಶಿಸಿದ್ದು, ಈ ಚಂಡಮಾರುತದಿಂದ ಕರ್ನಾಟಕ ಕರಾವಳಿಯ ಮುಂಗಾರಿನ ಮೇಲೆ ಪರಿಣಾಮ ಬೀರಲಿದೆ ಎನ್ನಲಾಗಿದೆ.

ಕ್ಷಣ ಕ್ಷಣದ ಕ್ರೈಮ್ ಸುದ್ದಿಗಾಗಿ POLICEVARTHE.COM ವೆಬ್ ಸೈಟ್ ಕ್ಲಿಕ್ ಮಾಡಿ, ವಿಕ್ಷೀಸಿ

ಆತ್ಮೀಯ Policevarthe.com ಓದುಗರೇ ನಿಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ನಡೆಯುವ ಅಪರಾಧ( ಕ್ರೈಮ್) ಸುದ್ದಿಗಳನ್ನು ತಕ್ಷಣವೇ ನಮಗೆ ಕಳುಹಿಸಿ, ನಿಮ್ಮ ಸುದ್ದಿಯನ್ನು ನಾವು ಪ್ರಕಟಿಸುತ್ತೇವೆ.

9741089956

Ranjith Madanthyar
Owener & Chief Editor Policevarthe.com Crime Website

More

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿನ ಕಾರಣದಿಂದ ಇಂದು ಇಬ್ಬರು...

ಮಂಗಳೂರು; ನಗರದ ವೆನ್ ಲಾಕ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಕೊರೊನಾ ಪಾಸಿಟಿವ್ ರೋಗಿ...


ಮಹಾನಗರ: ರಾಷ್ಟ್ರೀಯ ಹೆದ್ದಾರಿ 66ರ ಉಳ್ಳಾಲ ನೇತ್ರಾವತಿ ಸೇತುವೆಯಲ್ಲಿ ನಡೆಯುತ್ತಿರುವ ಅನಾಹುತಗಳನ್ನು ತಡೆಗಟ್ಟುವ...

ಬೆಳ್ತಂಗಡಿ: ತಾಲೂಕಿನ ಗೇರುಕಟ್ಟೆ ಕಳಿಯ ಗ್ರಾಮ ಪಂಚಾಯತ್ ನಲ್ಲಿ ಭ್ರಷ್ಟಾಚಾರ ಎಗ್ಗಿಲ್ಲದೆ...


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಯವರಿಗೂ...

ಮಂಗಳೂರು: ಕೋವಿಡ್ 19 ಸೋಂಕಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಒಂದೇ ದಿನ...


ನವದೆಹಲಿ: ಗಾಲ್ವಾನ್ ಕಣಿವೆ ಪ್ರದೇಶದಲ್ಲಿ ಭಾರತ ಮತ್ತು ಚೀನಾ ಯೋಧರ ನಡುವೆ ಸಂಘರ್ಷ...

ಮುಂಬೈ: ಬಾಲಿವುಡ್‍ನ ಹಿರಿಯ ನೃತ್ಯ ಸಂಯೋಜಕಿ ಸರೋಜ್ ಖಾನ್ (71) ಹೃದಯಾಘಾತದಿಂದ ಮುಂಜಾನೆ...


Copyright 2019 www.policevarthe.com | All Right Reserved
error: Content is protected !!