Monday, July 6 , 2020 10:52 AM

ಕ್ರೈಂ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಬಲಿ! ಆತ್ಮಹತ್ಯೆ ಮಾಡಿಕೊಂಡಿದ್ದ ವ್ಯಕ್ತಿಗೆ ಕೋವಿಡ್-19 ಸೋಂಕು ದೃಢ123

ಮಂಗಳೂರು: ಕೋವಿಡ್-19 ಸೋಂಕಿನ ಕಾರಣದಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಬಲಿಯಾಗಿದೆ. ಮೂಡಬಿದಿರೆ ತಾಲೂಕಿನ ಕಡಂದಲೆಯಲ್ಲಿ ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದ ವ್ಯಕ್ತಿಗೆ ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿದೆ. ಬುಧವಾರವಷ್ಟೇ ಮುಂಬೈನಿಂದ ಸಹೋದರರ ಜೊತೆಗೆ ಊರಿಗೆ ಆಗಮಿಸಿದ್ದ 55 ವರ್ಷದ ಆ ವ್ಯಕ್ತಿಯನ್ನು ಕಡಂದಲೆಯ ಜಿಲ್ಲಾ ಪಂಚಾಯತ್ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ವಾರಂಟೈನ್ ಮಾಡಲಾಗಿತ್ತು.

ಆದರೆ, ಇವರು ಶಾಲೆಯ ಜಗುಲಿಯ ಪಕ್ಕಾಸಿಗೆ ಬಟ್ಟೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಗುರುವಾರ ಮುಂಜಾನೆ ಈ ಘಟನೆ ಬೆಳಕಿಗೆ ಬಂದಿತ್ತು. ಮೃತರ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆಂದು ಕಳುಹಿಸಲಾಗಿತ್ತು. ಈ ವರದಿಯು ಶುಕ್ರವಾರದಂದು ಜಿಲ್ಲಾಡಳಿತದ ಕೈ ಸೇರಿದ್ದು, ವರದಿಯಲ್ಲಿ ಮೃತ ವ್ಯಕ್ತಿಗೆ ಕೋವಿಡ್ ಸೋಂಕು ಇದ್ದಿದ್ದು ದೃಢಪಟ್ಟಿತ್ತು.

ಮೃತರ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆಂದು ಕಳುಹಿಸಲಾಗಿತ್ತು. ಈ ವರದಿಯು ಶುಕ್ರವಾರದಂದು ಜಿಲ್ಲಾಡಳಿತದ ಕೈ ಸೇರಿದ್ದು, ವರದಿಯಲ್ಲಿ ಮೃತ ವ್ಯಕ್ತಿಗೆ ಕೋವಿಡ್ ಸೋಂಕು ಇದ್ದಿದ್ದು ದೃಢಪಟ್ಟಿತ್ತು. ಆತ್ಮಹತ್ಯೆ ಮಾಡಿಕೊಂಡಿರುವ ಈ ವ್ಯಕ್ತಿಯ ಅಂತ್ಯ ಸಂಸ್ಕಾರವನ್ನು ಅವರ ಕುಟುಂಬದ ಸಮ್ಮತಿಯೊಂದಿಗೆ ಕೋವಿಡ್ ನಿಯಮಾವಳಿಗೆ ಅನುಗುಣವಾಗಿ ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿರುವ ಬೋಳೂರು ವಿದ್ಯುತ್ ಚಿತಾಗಾರದಲ್ಲಿ ವೈದ್ಯಕೀಯ ನಿಗಾ ಸಹಿತ ನಡೆಸಲಾಗುವುದು ಎಂದು ಜಿಲ್ಲಾಡಳಿತದ ಪ್ರಕಟನೆ ತಿಳಿಸಿದೆ.

ಮೇ 22ರ ಶುಕ್ರವಾರದವರೆಗೆ ಜಿಲ್ಲೆಯಲ್ಲಿ 41,849 ಜನರನ್ನು ತಪಾಸಣೆಗೊಳಪಡಿಸಲಾಗಿದೆ. ಇಲ್ಲಿಯವರೆಗೆ 5671 ಕೋವಿಡ್ ಶಂಕಿತರ ಮಾದರಿಗಳನ್ನು ಪ್ರಯೋಗಾಲಯದಲ್ಲಿ ತಪಾಸಣೆಗೊಳಪಡಿಸಿದ್ದು, ಇವುಗಳಲ್ಲಿ 5609 ವರದಿಗಳು ನೆಗೆಟಿವ್ ಬಂದಿದೆ ಹಾಗೂ 63 ಪ್ರಕರಣಗಳು ಪಾಸಿಟಿವ್ ಆಗಿವೆ. ಇವುಗಳಲ್ಲಿ 8 ಪ್ರಕರಣಗಳು ಬೇರೆ ಜಿಲ್ಲೆಗೆ ಸಂಬಂಧಿಸಿದ್ದಾಗಿದೆ.

ಕ್ಷಣ ಕ್ಷಣದ ಕ್ರೈಮ್ ಸುದ್ದಿಗಾಗಿ POLICEVARTHE.COM ವೆಬ್ ಸೈಟ್ ಕ್ಲಿಕ್ ಮಾಡಿ, ವಿಕ್ಷೀಸಿ

ಆತ್ಮೀಯ Policevarthe.com ಓದುಗರೇ ನಿಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ನಡೆಯುವ ಅಪರಾಧ( ಕ್ರೈಮ್) ಸುದ್ದಿಗಳನ್ನು ತಕ್ಷಣವೇ ನಮಗೆ ಕಳುಹಿಸಿ, ನಿಮ್ಮ ಸುದ್ದಿಯನ್ನು ನಾವು ಪ್ರಕಟಿಸುತ್ತೇವೆ.

9741089956

Ranjith Madanthyar
Owener & Chief Editor Policevarthe.com Crime Website

More

ಮಂಗಳೂರು; ನಗರದ ವೆನ್ ಲಾಕ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಕೊರೊನಾ ಪಾಸಿಟಿವ್ ರೋಗಿ...

ಮಹಾನಗರ: ರಾಷ್ಟ್ರೀಯ ಹೆದ್ದಾರಿ 66ರ ಉಳ್ಳಾಲ ನೇತ್ರಾವತಿ ಸೇತುವೆಯಲ್ಲಿ ನಡೆಯುತ್ತಿರುವ ಅನಾಹುತಗಳನ್ನು ತಡೆಗಟ್ಟುವ...


ಬೆಳ್ತಂಗಡಿ: ತಾಲೂಕಿನ ಗೇರುಕಟ್ಟೆ ಕಳಿಯ ಗ್ರಾಮ ಪಂಚಾಯತ್ ನಲ್ಲಿ ಭ್ರಷ್ಟಾಚಾರ ಎಗ್ಗಿಲ್ಲದೆ...

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಯವರಿಗೂ...


ಮಂಗಳೂರು: ಕೋವಿಡ್ 19 ಸೋಂಕಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಒಂದೇ ದಿನ...

ನವದೆಹಲಿ: ಗಾಲ್ವಾನ್ ಕಣಿವೆ ಪ್ರದೇಶದಲ್ಲಿ ಭಾರತ ಮತ್ತು ಚೀನಾ ಯೋಧರ ನಡುವೆ ಸಂಘರ್ಷ...


ಮುಂಬೈ: ಬಾಲಿವುಡ್‍ನ ಹಿರಿಯ ನೃತ್ಯ ಸಂಯೋಜಕಿ ಸರೋಜ್ ಖಾನ್ (71) ಹೃದಯಾಘಾತದಿಂದ ಮುಂಜಾನೆ...

ಮಂಗಳೂರು: ಕೇಂದ್ರ ಅಪರಾಧ ದಳದ ಮಂಗಳೂರು ವಿಭಾಗದ ನಾಲ್ವರು ಪೊಲೀಸ್ ಅಧಿಕಾರಿಗಳಿಗೆ...


Copyright 2019 www.policevarthe.com | All Right Reserved
error: Content is protected !!