Monday, July 6 , 2020 11:05 AM

ಕ್ರೈಂ












ಮಹಾರಾಷ್ಟ್ರದಿಂದ ಮರಳಿದ್ದ ಬೆಳ್ತಂಗಡಿಯ ಯುವತಿಗೆ ಸೋಂಕು ದೃಢ



48

ಮಂಗಳೂರು: ಮಹಾರಾಷ್ಟ್ರದಿಂದ ಆಗಮಿಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಯುವತಿಗೆ ಕೋವಿಡ್-19 ಸೋಂಕು ದೃಢವಾಗಿದೆ. ಶುಕ್ರವಾರದ ವರದಿಯಲ್ಲಿ ಜಿಲ್ಲೆಯಲ್ಲಿ ಏಕೈಕ ಸೋಂಕು ಪ್ರಕರಣ ವರದಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಆರಂಬೋಡಿಯ 29 ವರ್ಷದ ಯುವತಿಗೆ ಸೋಂಕು ತಾಗಿರುವುದು ದೃಢವಾಗಿದೆ. ಈಕೆ ಕಳೆದ 18ರಂದು ಮಹಾರಾಷ್ಟ್ರ ರಾಜ್ಯದ ದೊಂಬಿವಿಲಿ, ಥಾಣೆ, ಮುಂಬೈನಿಂದ ಪ್ರಯಾಣ ಬೆಳೆಸಿದ್ದರು.

ಇವರನ್ನು ಬೆಳ್ತಂಗಡಿಯಲ್ಲಿ ಜಿಲ್ಲಾಡಳಿತದ ವತಿಯಿಂದ ಸ್ಥಾಪಿಸಲಾದ ಕ್ವಾರಂಟೈನ್ ಕೇಂದ್ರದಲ್ಲಿ ಇರಿಸಲಾಗಿರುತ್ತದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ರಾಜ್ಯದಲ್ಲಿ ಇಂದು ಒಟ್ಟು 105 ಹೊಸ ಕೋವಿಡ್-19 ಸೋಂಕು ಪ್ರಕರಣಗಳು ದೃಢವಾಗಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1710ಕ್ಕೆ ಏರಿಕೆಯಾಗಿದೆ. ಇದರಲ್ಲಿ 588 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು 41 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಓರ್ವ ಸೋಂಕಿತ ಕೋವಿಡ್ ಅಲ್ಲದ ಕಾರಣದಿಂದ ಮರಣ ಹೊಂದಿದ್ದಾನೆ.

ಕ್ಷಣ ಕ್ಷಣದ ಕ್ರೈಮ್ ಸುದ್ದಿಗಾಗಿ POLICEVARTHE.COM ವೆಬ್ ಸೈಟ್ ಕ್ಲಿಕ್ ಮಾಡಿ, ವಿಕ್ಷೀಸಿ

ಆತ್ಮೀಯ Policevarthe.com ಓದುಗರೇ ನಿಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ನಡೆಯುವ ಅಪರಾಧ( ಕ್ರೈಮ್) ಸುದ್ದಿಗಳನ್ನು ತಕ್ಷಣವೇ ನಮಗೆ ಕಳುಹಿಸಿ, ನಿಮ್ಮ ಸುದ್ದಿಯನ್ನು ನಾವು ಪ್ರಕಟಿಸುತ್ತೇವೆ.

9741089956

Ranjith Madanthyar
Owener & Chief Editor Policevarthe.com Crime Website

More

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿನ ಕಾರಣದಿಂದ ಇಂದು ಇಬ್ಬರು...

ಮಂಗಳೂರು; ನಗರದ ವೆನ್ ಲಾಕ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಕೊರೊನಾ ಪಾಸಿಟಿವ್ ರೋಗಿ...


ಮಹಾನಗರ: ರಾಷ್ಟ್ರೀಯ ಹೆದ್ದಾರಿ 66ರ ಉಳ್ಳಾಲ ನೇತ್ರಾವತಿ ಸೇತುವೆಯಲ್ಲಿ ನಡೆಯುತ್ತಿರುವ ಅನಾಹುತಗಳನ್ನು ತಡೆಗಟ್ಟುವ...

ಬೆಳ್ತಂಗಡಿ: ತಾಲೂಕಿನ ಗೇರುಕಟ್ಟೆ ಕಳಿಯ ಗ್ರಾಮ ಪಂಚಾಯತ್ ನಲ್ಲಿ ಭ್ರಷ್ಟಾಚಾರ ಎಗ್ಗಿಲ್ಲದೆ...


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಯವರಿಗೂ...

ಮಂಗಳೂರು: ಕೋವಿಡ್ 19 ಸೋಂಕಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಒಂದೇ ದಿನ...


ನವದೆಹಲಿ: ಗಾಲ್ವಾನ್ ಕಣಿವೆ ಪ್ರದೇಶದಲ್ಲಿ ಭಾರತ ಮತ್ತು ಚೀನಾ ಯೋಧರ ನಡುವೆ ಸಂಘರ್ಷ...

ಮುಂಬೈ: ಬಾಲಿವುಡ್‍ನ ಹಿರಿಯ ನೃತ್ಯ ಸಂಯೋಜಕಿ ಸರೋಜ್ ಖಾನ್ (71) ಹೃದಯಾಘಾತದಿಂದ ಮುಂಜಾನೆ...


Copyright 2019 www.policevarthe.com | All Right Reserved
error: Content is protected !!