Monday, July 6 , 2020 12:19 PM

ಕ್ರೈಂ












ರಾಜ್ಯವನ್ನೇ ಬೆಚ್ಚಿಬೀಳಿಸಿದ ಉಡುಪಿ ಜಿಲ್ಲೆಯ ಕೋವಿಡ್ ಮಹಾಸ್ಪೋಟ: ಒಂದೇ ದಿನ 210 ಜನರಿಗೆ ಸೋಂಕು ದೃಢ



55

ಉಡುಪಿ: ರಾಜ್ಯವನ್ನೇ ಬೆಚ್ಚಿಬೀಳಿಸುವಂತಹ ಕೋವಿಡ್-19 ಸೋಂಕಿತರ ಸಂಖ್ಯೆ ಇಂದು ಉಡುಪಿಯಲ್ಲಿ ದೃಢವಾಗಿದೆ. ಇಂದು ಒಂದೇ ದಿನ ಉಡುಪಿ ಜಿಲ್ಲೆಯಲ್ಲಿ ಬರೋಬ್ಬರಿ 210 ಜನರಿಗೆ ಸೋಂಕು ದೃಢವಾಗಿದೆ. ಬೆಂಗಳೂರಿನಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಸಚಿವ ಆರ್ ಅಶೋಕ್, ಉಡುಪಿಯಲ್ಲಿ ಇಂದು 210 ಮಂದಿಗೆ ಕೋವಿಡ್-19 ಸೋಂಕು ತಗುಲಿರುವುದು ಧೃಡವಾಗಿದೆ. ಮಹಾರಾಷ್ಟ್ರದಿಂದ ಬಂದ ಪ್ರಯಾಣಿಕರಲ್ಲೇ ಹೆಚ್ಚಿನ ಸೋಂಕು ಕಾಣಿಸಿಕೊಳ್ಳುತ್ತಿರುವ ಕಾರಣ, ಮಹಾರಾಷ್ಟ್ರ ದಿಂದ ಬಂದವರ ಮೇಲೆ ತೀವ್ರ ನಿಗಾ ವಹಿಸಲು ನಿರ್ಧರಿಸಲಾಗಿದೆ ಎಂದು ಸಚಿವ ಆರ್. ಅಶೋಕ್ ಹೇಳಿದರು.

ಜಿಲ್ಲೆಯಲ್ಲಿ ಈವರೆಗೆ 260 ಕೋವಿಡ್19 ಸೋಂಕು ಪ್ರಕರಣಗಳು ದೃಢವಾಗಿತ್ತು. ಇಂದಿನ 210 ಹೊಸ ಪ್ರಕರಣಗಳು ಕಾರಣದಿಂದ ಜಿಲ್ಲೆಯ ಸೋಂಕಿತರ ಸಂಖ್ಯೆ 470ಕ್ಕೆ ಏರಿಕೆ ಕಂಡಿದೆ. ಸುಮಾರು ಒಂದು ತಿಂಗಳ ಹಿಂದೆ ಯಾವುದೇ ಸಕ್ರಿಯ ಪ್ರಕರಣಗಳಿಲ್ಲದೆ ನಿರಾಳವಾಗಿದ್ದ ಉಡುಪಿ ಜಿಲ್ಲೆಯಲ್ಲಿ ಸೋಂಕಿನ ಪ್ರಕರಣಗಳು ರಾಕೆಟ್ ವೇಗದಲ್ಲಿ ಏರಿಕೆ ಕಾಣುತ್ತಿದೆ. ಮಹಾರಾಷ್ಟ್ರ ಸೇರಿದಂತೆ ಅನ್ಯ ರಾಜ್ಯಗಳಿಂದ ಬಂದು ಕ್ವಾರಂಟೈನ್ ನಲ್ಲಿರುವ ಜನರ ಗಂಟಲು ದ್ರವ ವರದಿಗಳು ಜಿಲ್ಲಾಡಳಿತದ ಕೈ ಸೇರುತ್ತಿದೆ.

 ಸದ್ಯ ಕಂಡು ಬರುತ್ತಿರುವ ಸೋಂಕಿತರ ಪೈಕಿ ಬಹಳಷ್ಟು ಮಂದಿ ಕ್ವಾರಂಟೈನ್ ಮುಗಿಸಿ ಮನೆಗೆ ತೆರಳಿದ್ದರು. ಆದರೆ ಅವರ ಗಂಟಲು ದ್ರವ ವರದಿ ಸದ್ಯ ಜಿಲ್ಲಾಡಳಿತದ ಕೈ ಸೇರುತ್ತಿದೆ. ಮನೆಗೆ ಬಂದವರಲ್ಲಿ ಕೋವಿಡ್-19 ಸೋಂಕು ಕಾಣಿಸಿಕೊಳ್ಳುತ್ತಿರುವುದು ಜನತೆಯ ಆತಂಕಕ್ಕೆ ಕಾರಣವಾಗಿದೆ. ಮಹಾರಾಷ್ಟ್ರದಿಂದ ಬಂದವರಿಗೆ 7 ದಿನ ಸಾಂಸ್ಥಿಕ ಕ್ವಾರೆಂಟೈನ್ ಹಾಗೂ 14 ದಿ‌ನ ಗೃಹ ಕ್ವಾರೆಂಟೈನ್ ವಿಧಿಸಲು ಚಿಂತಿಸಲಾಗಿದೆ. ಉಳಿದ ರಾಜ್ಯದಿಂದ ಬರುವವರಿಗೆ ಕ್ವಾರೆಂಟೈನ್ ಬಗ್ಗೆಯೂ ಚರ್ಚಿಸಲಾಗಿದ್ದು ಶೀಘ್ರವೇ ಮಾರ್ಗಸೂಚಿ ಹೊರಬೀಳಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಕ್ಷಣ ಕ್ಷಣದ ಕ್ರೈಮ್ ಸುದ್ದಿಗಾಗಿ POLICEVARTHE.COM ವೆಬ್ ಸೈಟ್ ಕ್ಲಿಕ್ ಮಾಡಿ, ವಿಕ್ಷೀಸಿ

ಆತ್ಮೀಯ Policevarthe.com ಓದುಗರೇ ನಿಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ನಡೆಯುವ ಅಪರಾಧ( ಕ್ರೈಮ್) ಸುದ್ದಿಗಳನ್ನು ತಕ್ಷಣವೇ ನಮಗೆ ಕಳುಹಿಸಿ, ನಿಮ್ಮ ಸುದ್ದಿಯನ್ನು ನಾವು ಪ್ರಕಟಿಸುತ್ತೇವೆ.

9741089956

Ranjith Madanthyar
Owener & Chief Editor Policevarthe.com Crime Website

More

ಮಂಗಳೂರು ; ನಾವು ನಮ್ಮ ತಲೆಮಾರಿನ ಅತ್ಯಂತ ಸವಾಲಿನ ದಿನಗಳನ್ನು ಕಳೆಯುತ್ತಿದ್ದೇವೆ....

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿನ ಕಾರಣದಿಂದ ಇಂದು ಇಬ್ಬರು...


ಮಂಗಳೂರು; ನಗರದ ವೆನ್ ಲಾಕ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಕೊರೊನಾ ಪಾಸಿಟಿವ್ ರೋಗಿ...

ಮಹಾನಗರ: ರಾಷ್ಟ್ರೀಯ ಹೆದ್ದಾರಿ 66ರ ಉಳ್ಳಾಲ ನೇತ್ರಾವತಿ ಸೇತುವೆಯಲ್ಲಿ ನಡೆಯುತ್ತಿರುವ ಅನಾಹುತಗಳನ್ನು ತಡೆಗಟ್ಟುವ...


ಬೆಳ್ತಂಗಡಿ: ತಾಲೂಕಿನ ಗೇರುಕಟ್ಟೆ ಕಳಿಯ ಗ್ರಾಮ ಪಂಚಾಯತ್ ನಲ್ಲಿ ಭ್ರಷ್ಟಾಚಾರ ಎಗ್ಗಿಲ್ಲದೆ...

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಯವರಿಗೂ...


ಮಂಗಳೂರು: ಕೋವಿಡ್ 19 ಸೋಂಕಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಒಂದೇ ದಿನ...

ನವದೆಹಲಿ: ಗಾಲ್ವಾನ್ ಕಣಿವೆ ಪ್ರದೇಶದಲ್ಲಿ ಭಾರತ ಮತ್ತು ಚೀನಾ ಯೋಧರ ನಡುವೆ ಸಂಘರ್ಷ...


Copyright 2019 www.policevarthe.com | All Right Reserved
error: Content is protected !!