Monday, July 6 , 2020 10:04 AM

ಕ್ರೈಂ












ಸಂಪೂರ್ಣ ಲಾಕ್ ಡೌನ್ ಬಗ್ಗೆ ಇಂದು ಸಂಜೆ ನಿರ್ಧಾರ; ಬಿ ಎಸ್ ಯಡಿಯೂರಪ್ಪ



88

ಬೆಂಗಳೂರು: ಕೋವಿಡ್-19 ಸೋಂಕು ತಡೆಗಟ್ಟಲು ಸಂಪೂರ್ಣ ರಾಜ್ಯ ಲಾಕ್ ಡೌನ್ ಮಾಡುವ ಬಗ್ಗೆ ಇಂದು ಸಂಜೆ ತೀರ್ಮಾನಿಸಲಾಗುವುದು ಎಂದುಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು. ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ತಜ್ಷ ವೈದ್ಯರೊಂದಿಗೆ ಚರ್ಚಿಸಿ ಕೆಲವು ನಿರ್ಧಾರಗಳನ್ನು ಕೈಗೊಂಡಿದ್ದೇವೆ ಎಂದರು.

ಕೋವಿಡ್-19 ತಡೆಗೆ ಖಾಸಗಿ ಆಸ್ಪತ್ರೆಗಳ ಸಹಭಾಗಿತ್ವ ಪಡೆಯಲಾಗುವುದು. ಬೆಂಗಳೂರಿನಲ್ಲಿ ಜನತೆ ಲಾಕ್ ಡೌನ್ ಇದ್ದರೂ ತಲೆಕೆಡಸಿಕೊಂಡಿಲ್ಲ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಬಗ್ಗೆ ಚರ್ಚೆ ನಡೆಸಿ ಸಂಜೆಯೊಳಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು. ವಿಕ್ಟೋರಿಯಾ ಆಸ್ಪತ್ರೆಯಲ್ಲಿ 1200 ಹಾಸಿಗೆಯ ವ್ಯವಸ್ಥೆ ಕೋವಿಡ್-19 ಚಿಕಿತ್ಸೆಗಾಗಿ ಮೀಸಲಿಡಲಾಗಿದೆ. ಇದರೊಂದಿಗೆ ಖಾಸಗಿ ಆಸ್ಪತ್ರೆಯಲ್ಲಿ 1200 ಹಾಸಿಗೆ ಕೊರೊನಾ ಚಿಕಿತ್ಸೆ ನೀಡುವ ವ್ಯವಸ್ಥೆ ಮಾಡಲಾಗುತ್ತದೆ ಎಂದರು.

ನಗರದಿಂದ ಯಾರೂ ಸಹ ಹಳ್ಳಿಗಳಿಗೆ ಹೋಗಬಾರದು. ಮನೆಯಲ್ಲೇ ಇದ್ದು ಕೊರೊನಾ ಸೋಂಕು ತಡೆಗೆ ಸಹಕರಿಸಲು ಬಿಎಸ್ ವೈ ಮನವಿ ಮಾಡಿದರು. ಕೋವಿಡ್-19 ಸೋಂಕು ಕಾರಣದಿಂದ ಪರದಾಡುತ್ತಿರುವ ಬಡ ಜನರಿಗೆ ಸಹಾಯವಾಗುವ ಕಾರಣದಿಂದ ಬೆಂಗಳೂರಿನ ಬಡ ಜನರಿಗೆ ಇಂದಿರಾ ಕ್ಯಾಂಟೀನ್ ಗಳಲ್ಲಿ ಉಚಿತ ಊಟ ವಿತರಿಸಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.

ಕ್ಷಣ ಕ್ಷಣದ ಕ್ರೈಮ್ ಸುದ್ದಿಗಾಗಿ POLICEVARTHE.COM ವೆಬ್ ಸೈಟ್ ಕ್ಲಿಕ್ ಮಾಡಿ, ವಿಕ್ಷೀಸಿ

ಆತ್ಮೀಯ Policevarthe.com ಓದುಗರೇ ನಿಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ನಡೆಯುವ ಅಪರಾಧ( ಕ್ರೈಮ್) ಸುದ್ದಿಗಳನ್ನು ತಕ್ಷಣವೇ ನಮಗೆ ಕಳುಹಿಸಿ, ನಿಮ್ಮ ಸುದ್ದಿಯನ್ನು ನಾವು ಪ್ರಕಟಿಸುತ್ತೇವೆ.

9741089956

Ranjith Madanthyar
Owener & Chief Editor Policevarthe.com Crime Website

More

ಮಂಗಳೂರು; ನಗರದ ವೆನ್ ಲಾಕ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಕೊರೊನಾ ಪಾಸಿಟಿವ್ ರೋಗಿ...

ಮಹಾನಗರ: ರಾಷ್ಟ್ರೀಯ ಹೆದ್ದಾರಿ 66ರ ಉಳ್ಳಾಲ ನೇತ್ರಾವತಿ ಸೇತುವೆಯಲ್ಲಿ ನಡೆಯುತ್ತಿರುವ ಅನಾಹುತಗಳನ್ನು ತಡೆಗಟ್ಟುವ...


ಬೆಳ್ತಂಗಡಿ: ತಾಲೂಕಿನ ಗೇರುಕಟ್ಟೆ ಕಳಿಯ ಗ್ರಾಮ ಪಂಚಾಯತ್ ನಲ್ಲಿ ಭ್ರಷ್ಟಾಚಾರ ಎಗ್ಗಿಲ್ಲದೆ...

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಯವರಿಗೂ...


ಮಂಗಳೂರು: ಕೋವಿಡ್ 19 ಸೋಂಕಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಒಂದೇ ದಿನ...

ನವದೆಹಲಿ: ಗಾಲ್ವಾನ್ ಕಣಿವೆ ಪ್ರದೇಶದಲ್ಲಿ ಭಾರತ ಮತ್ತು ಚೀನಾ ಯೋಧರ ನಡುವೆ ಸಂಘರ್ಷ...


ಮುಂಬೈ: ಬಾಲಿವುಡ್‍ನ ಹಿರಿಯ ನೃತ್ಯ ಸಂಯೋಜಕಿ ಸರೋಜ್ ಖಾನ್ (71) ಹೃದಯಾಘಾತದಿಂದ ಮುಂಜಾನೆ...

ಮಂಗಳೂರು: ಕೇಂದ್ರ ಅಪರಾಧ ದಳದ ಮಂಗಳೂರು ವಿಭಾಗದ ನಾಲ್ವರು ಪೊಲೀಸ್ ಅಧಿಕಾರಿಗಳಿಗೆ...


Copyright 2019 www.policevarthe.com | All Right Reserved
error: Content is protected !!