Monday, July 6 , 2020 11:29 AM

ಕ್ರೈಂ












ಸುಪ್ರೀಂ ತೀರ್ಪು; 17 ಶಾಸಕರ ಅನರ್ಹತೆ ಸರಿ, ಸದ್ಯಕ್ಕಿಲ್ಲ ಮಂತ್ರಿಗಿರಿ!



113

ನವದೆಹಲಿ: ಹದಿನೇಳು ಮಂದಿ ಅನರ್ಹ ಶಾಸಕರಿಗೆ ಸಂಬಂಧಿಸಿದಂತೆ ಅಂದಿನ ಸ್ಪೀಕರ್ ರಮೇಶ್ ಕುಮಾರ್ ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್ ಪೀಠ ಬುಧವಾರ ಎತ್ತಿಹಿಡಿದಿದ್ದು, ಉಪಚುನಾವಣೆಯಲ್ಲಿ ಅನರ್ಹ ಶಾಸಕರು ಸ್ಪರ್ಧಿಸಬಹುದು ಎಂದು ತೀರ್ಪು ನೀಡಿದೆ.

ರಾಜ್ಯ ಉಪಚುನಾವಣೆಯ ಹಿನ್ನೆಲೆಯಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಅನರ್ಹ ಶಾಸಕರ ಪ್ರಕರಣಕ್ಕೆ ತೆರೆ ಬಿದ್ದಂತಾಗಿದೆ. 2023ರವರೆಗೆ ಅನರ್ಹ ಶಾಸಕರು ಚುನಾವಣೆಗೆ ಸ್ಪರ್ಧಿಸುವಂತಿಲ್ಲ ಎಂಬ ಸ್ಪೀಕರ್ ಆದೇಶವನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ. ರಾಜೀನಾಮೆ ಸ್ವೀಕರಿಸುವುದಷ್ಟೇ ಸ್ಪೀಕರ್ ಕೆಲಸ ಎಂದು ಸುಪ್ರೀಂ ಪೀಠ ಸ್ಪಷ್ಟಪಡಿಸಿದೆ.

ಶಾಸಕರ ಅನರ್ಹತೆಗೆ ಅವಧಿ ನಿರ್ಧಾರ ಮಾಡುವಂತಿಲ್ಲ. ಅನರ್ಹತೆ ಕೇವಲ ಉಪಚುನಾವಣೆ ನಡೆಯುವವರೆಗೆ ಮಾತ್ರ. ವಿಧಾನಸಭೆ ಅವಧಿ ಮುಗಿಯುವವರೆಗೆ ಅಲ್ಲ. ಅನರ್ಹ ಶಾಸಕರು ಉಪಚುನಾವಣೆಗೆ ಸ್ಪರ್ಧಿಸಬಹುದು. ಆದರೆ ಚುನಾವಣೆಗೆ ಸ್ಪರ್ಧಿಸುವವರೆಗೆ ಮಂತ್ರಿಯಾಗುವಂತಿಲ್ಲ. ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ ನಂತರ ಮಂತ್ರಿಯಾಗಬಹುದು ಎಂದು ತೀರ್ಪಿನಲ್ಲಿ ಹೇಳಿದೆ. ಚುನಾವಣೆ ಸ್ಪರ್ಧೆಗೆ ಸ್ಪೀಕರ್ ನಿರ್ಬಂಧ ತಪ್ಪು. ಶಾಸಕರ ರಾಜೀನಾಮೆ ಸ್ವಯಂ ಪ್ರೇರಿತವಾಗಿದ್ದರೆ ಅದನ್ನು ಒಪ್ಪಬೇಕು. ಶಾಸಕರ ರಾಜೀನಾಮೆ ಅಂಗೀಕರಿಸಬೇಕು. ರಾಜೀನಾಮೆ ಅಂಗೀಕರಿಸಲಿ ಅಥವಾ ಅನರ್ಹಗೊಳಿಸಲಿ ಶಾಸಕ ಸ್ಥಾನ ಖಾಲಿಯಾಗುತ್ತದೆ. ಆಗ ಚುನಾವಣೆ ನಡೆಯಲೇಬೇಕಾಗುತ್ತದೆ.

ಕ್ಷಣ ಕ್ಷಣದ ಕ್ರೈಮ್ ಸುದ್ದಿಗಾಗಿ POLICEVARTHE.COM ವೆಬ್ ಸೈಟ್ ಕ್ಲಿಕ್ ಮಾಡಿ, ವಿಕ್ಷೀಸಿ

ಆತ್ಮೀಯ Policevarthe.com ಓದುಗರೇ ನಿಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ನಡೆಯುವ ಅಪರಾಧ( ಕ್ರೈಮ್) ಸುದ್ದಿಗಳನ್ನು ತಕ್ಷಣವೇ ನಮಗೆ ಕಳುಹಿಸಿ, ನಿಮ್ಮ ಸುದ್ದಿಯನ್ನು ನಾವು ಪ್ರಕಟಿಸುತ್ತೇವೆ.

9741089956

Ranjith Madanthyar
Owener & Chief Editor Policevarthe.com Crime Website

More

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿನ ಕಾರಣದಿಂದ ಇಂದು ಇಬ್ಬರು...

ಮಂಗಳೂರು; ನಗರದ ವೆನ್ ಲಾಕ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಕೊರೊನಾ ಪಾಸಿಟಿವ್ ರೋಗಿ...


ಮಹಾನಗರ: ರಾಷ್ಟ್ರೀಯ ಹೆದ್ದಾರಿ 66ರ ಉಳ್ಳಾಲ ನೇತ್ರಾವತಿ ಸೇತುವೆಯಲ್ಲಿ ನಡೆಯುತ್ತಿರುವ ಅನಾಹುತಗಳನ್ನು ತಡೆಗಟ್ಟುವ...

ಬೆಳ್ತಂಗಡಿ: ತಾಲೂಕಿನ ಗೇರುಕಟ್ಟೆ ಕಳಿಯ ಗ್ರಾಮ ಪಂಚಾಯತ್ ನಲ್ಲಿ ಭ್ರಷ್ಟಾಚಾರ ಎಗ್ಗಿಲ್ಲದೆ...


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಯವರಿಗೂ...

ಮಂಗಳೂರು: ಕೋವಿಡ್ 19 ಸೋಂಕಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಒಂದೇ ದಿನ...


ನವದೆಹಲಿ: ಗಾಲ್ವಾನ್ ಕಣಿವೆ ಪ್ರದೇಶದಲ್ಲಿ ಭಾರತ ಮತ್ತು ಚೀನಾ ಯೋಧರ ನಡುವೆ ಸಂಘರ್ಷ...

ಮುಂಬೈ: ಬಾಲಿವುಡ್‍ನ ಹಿರಿಯ ನೃತ್ಯ ಸಂಯೋಜಕಿ ಸರೋಜ್ ಖಾನ್ (71) ಹೃದಯಾಘಾತದಿಂದ ಮುಂಜಾನೆ...


Copyright 2019 www.policevarthe.com | All Right Reserved
error: Content is protected !!