Wednesday, August 12 , 2020 11:01 AM

ಕ್ರೈಂ












ಹುಬ್ಬಳ್ಳಿ ಸ್ಫೋಟ ಪ್ರಕರಣ; ಆಂಧ್ರಪ್ರದೇಶದಿಂದ ಮಹಾರಾಷ್ಟ್ರಕ್ಕೆ ಸ್ಫೋಟಕ ಕಳುಹಿಸಿದ್ದ ಶಂಕೆ



226

ಮಂಗಳೂರು: ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಸಂಭವಿಸಿದ ಸ್ಫೋಟ ಪ್ರಕರಣದ ಬಗ್ಗೆ ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶದ ಪೊಲೀಸರನ್ನು ಸಂಪರ್ಕಿಸಲಾಗಿದ್ದು ಅವರ ಜೊತೆಗೆ ನಮ್ಮ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದರು. ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಆಂಧ್ರಪ್ರದೇಶದಿಂದ ಮಹಾರಾಷ್ಟ್ರಕ್ಕೆ ಈ ಸ್ಫೋಟಕ ಕಳುಹಿಸಲಾಗಿತ್ತು ಎಂಬ ಶಂಕೆ ಇದೆ. ಅಮರಾವತಿ ಎಕ್ಸ್​ಪ್ರೆಸ್​​ನಲ್ಲಿ ಈ ಘಟನೆ ನಡೆದಿರುವುದರಿಂದ ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರ ಪೊಲೀಸರನ್ನು ತನಿಖೆಯ ಉದ್ದೇಶಕ್ಕಾಗಿ ಸಂಪರ್ಕಿಸಲಾಗಿದೆ ಎಂದರು.

ಸ್ಫೋಟಕವನ್ನು ಫಾರೆನ್ಸಿಕ್ ಲ್ಯಾಬ್​​ಗೆ ಕಳುಹಿಸಲಾಗಿದ್ದು, ಇದರಿಂದ ಸ್ಫೋಟದ ತೀವ್ರತೆ ಎಷ್ಟು ಅನ್ನೋದು ತಿಳಿಯಲಿದೆ. ತನಿಖೆಯ ಬಳಿಕ ಯಾವ ಉದ್ದೇಶಕ್ಕಾಗಿ ಈ ಸ್ಫೋಟಕ ಕೊಂಡೊಯ್ಯಲಾಗುತ್ತಿತ್ತು ಎಂಬುದು ಸಹ ಗೊತ್ತಾಗಲಿದೆ ಎಂದು ಗೃಹ ಸಚಿವರು ತಿಳಿಸಿದರು. ಇನ್ನು, ರಾಜ್ಯಾದ್ಯಂತ ಮಳೆಯಿಂದ ಆಗಿರುವ ಹಾನಿಗೆ ತಿಂಗಳ ಹಿಂದೆ ನೀಡಿದಂತೆಯೇ ಪರಿಹಾರ ಒದಗಿಸಲು ಮುಖ್ಯಮಂತ್ರಿ ಸೂಚಿಸಿದ್ದಾರೆ. ಅದರಂತೆ ಪರಿಹಾರ ನೀಡಲಾಗುವುದು ಎಂದು ಸಚಿವರು ಮಾಹಿತಿ ನೀಡಿದರು.

ಕ್ಷಣ ಕ್ಷಣದ ಕ್ರೈಮ್ ಸುದ್ದಿಗಾಗಿ POLICEVARTHE.COM ವೆಬ್ ಸೈಟ್ ಕ್ಲಿಕ್ ಮಾಡಿ, ವಿಕ್ಷೀಸಿ

ಆತ್ಮೀಯ Policevarthe.com ಓದುಗರೇ ನಿಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ನಡೆಯುವ ಅಪರಾಧ( ಕ್ರೈಮ್) ಸುದ್ದಿಗಳನ್ನು ತಕ್ಷಣವೇ ನಮಗೆ ಕಳುಹಿಸಿ, ನಿಮ್ಮ ಸುದ್ದಿಯನ್ನು ನಾವು ಪ್ರಕಟಿಸುತ್ತೇವೆ.

9741089956

Ranjith Madanthyar
Owner & Chief Editor Policevarthe.com Crime Website

More

ಬೆಂಗಳೂರು: ಕಾಂಗ್ರೆಸ್​ ಶಾಸಕ ಅಖಂಡ ಶ್ರೀನಿವಾಸ್‌ ಸಂಬಂಧಿವೋರ್ವ ಸಾಮಾಜಿಕ ಜಾಲತಾಣದಲ್ಲಿ ಮಾಡಿರುವ ಪೋಸ್ಟ್​...

ಬೆಂಗಳೂರು: ಕಾಂಗ್ರೆಸ್​ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಕಾವಲ್​ ಭೈರ್​ಸಂದ್ರ ಮನೆ, ಕಚೇರಿ...


ಬೆಂಗಳೂರು: ವ್ಯಕ್ತಿಯೊಬ್ಬ ತನ್ನ ಫೇಸ್‌ಬುಕ್‌ ಖಾತೆಯಲ್ಲಿ ಧಾರ್ಮಿಕ ಅವಹೇಳನ ಮಾಡಿದ ವಿಷಯಕ್ಕೆ ಸಂಬಂಧಿಸಿದಂತೆ...

ಬಂಟ್ವಾಳ: ಮೂರು ವರ್ಷಗಳ ಹಿಂದೆ ನಡೆದ ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ...


ಮಂಗಳೂರು: ನೂತನ ಉಪಪೊಲೀಸ್ ಆಯುಕ್ತರಾಗಿ ವಿನಯ್ ಗಾಂವ್ಕರ್ ಅವರನ್ನು ನಿಯುಕ್ತಿಗೊಳಿಸಿ ರಾಜ್ಯ...

ಕೊಡಗು: ಜಿಲ್ಲೆಯ ಪ್ರಸಿದ್ದ ಕಾವೇರಿ ತೀರ್ಥಕ್ಷೇತ್ರ ತಲಕಾವೇರಿಯಲ್ಲಿ ಭಾರಿ ಪ್ರಮಾಣದ ಭೂಕುಸಿತ...


ಕೊಡಗು: ಬ್ರಹ್ಮಗಿರಿ ಬೆಟ್ಟ ಕುಸಿದು ಅರ್ಚಕರ ಕುಟುಂಬಗಳು ಕಣ್ಮರೆಯಾಗಿರುವ ಪ್ರದೇಶಕ್ಕೆ ರಕ್ಷಣಾ ತಂಡಗಳು...

ಮಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ದಕ್ಷ, ಪ್ರಾಮಾಣಿಕ ಅಧಿಕಾರಿ...


Copyright 2019 www.policevarthe.com | All Right Reserved
error: Content is protected !!