ಕಾರ್ಕಳ: ಕರಿಮಣಿ ಮಾಲಿಕ ನೀನಲ್ಲ ಎಂದು ಗಂಡನ ಜೊತೆ ರೀಲ್ಸ್ ಮಾಡಿ ಕೊನೆಗೆ ಪ್ರಿಯಕರ ದಿಲೀಪ್‌ನ ಜೊತೆ ಸೇರಿ ಗಂಡ ಬಾಲಕೃಷ್ಣ ಎನ್ನುವವರನ್ನು ಪತ್ನಿ ಪ್ರತಿಮಾ ಎಂಬಾಕೆ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ದಿಲೀಪ್ ಹೆಗ್ಡೆಯ ಜಾಮೀನು ಅರ್ಜಿಯನ್ನು ಕಾರ್ಕಳದ 2 ನೇ ಹೆಚ್ಚುವರಿ ನ್ಯಾಯಾಲಯದ ಸಂಚಾರಿ ಪೀಠ ತಿರಸ್ಕರಿಸಿದೆ.
ಈಗಾಗಲೇ ನ್ಯಾಯಾಂಗ ಬಂಧನಕ್ಕೆ ಒಳಪಟ್ಟಿರುವ ದಿಲೀಪ್ ಜಾಮೀನು ಅರ್ಜಿ ಸಲ್ಲಿಸಿದ್ದು, ಇದಕ್ಕೆ ಸರ್ಕಾರಿ ಅಭಿಯೋಜಕರಾದ ಪ್ರಕಾಶ್ಚಂದ್ರ ಶೆಟ್ಟಿ ಆಕ್ಷೇಪ ವ್ಯಕ್ತಪಡಿಸಿದ್ದರು.
ಈ ಸಂಬಂಧ ವಾದ – ಪ್ರತಿವಾದಗಳನ್ನು ಆಲಿಸಿದ ನ್ಯಾಯಾಧೀಶರು ಆರೋಪಿಯ ವಿರುದ್ಧ ಚಾರ್ಜ್‌ಶೀಟ್‌ನಲ್ಲಿ ಸಲ್ಲಿಕೆ ಮಾಡಲಾದ ಗಂಭೀರ ಅಂಶಗಳನ್ನು ಪರಿಗಣಿಸಿ ಜಾಮೀನು ಅರ್ಜಿ ತಿರಸ್ಕರಿಸಿದ್ದಾರೆ.
ಹಾಗೆಯೇ ಈ ಪ್ರಕರಣದ ಮತ್ತೋರ್ವ ಪ್ರಮುಖ ಆರೋಪಿ ಪ್ರತಿಮಾ ಜಾನೀನು ಅರ್ಜಿ ಸಲ್ಲಿಸಿದ್ದು, ಇದಕ್ಕೆ ಆಕ್ಷೇಪಣೆ ಸಲ್ಲಿಸಲು ಸರ್ಕಾರಿ ವಕೀಲರಿಗೆ ಮಾ. 10 ಕ್ಕೆ ದಿನಾಂಕ ನಿಗದಿ ಮಾಡಿ ನ್ಯಾಯಾಲಯ ಆದೇಶ ನೀಡಿದೆ.