ಬಂಟ್ವಾಳ: ರಸ್ತೆ ಸಂಚಾರಿ ನಿಯಮ ಉಲ್ಲಂಘಿಸಿ ವಿರುದ್ಧ ದಿಕ್ಕಿನಿಂದ ಬಂದ ಖಾಸಗಿ ಬಸ್ಸು ಗುದ್ದಿ ಕಾರು ಚಾಲಕ ಗಂಭೀರ ಗಾಯಗೊಂಡ ಘಟನೆ ಬಿ. ಸಿ. ರೋಡಿನ ಸರ್ಕಲ್ ಬಳಿ ನಡೆದಿದೆ.
ಗಾಯಾಳು ಕಾರು ಚಾಲಕನನ್ನು ಕೇರಳದ ವಿಶ್ವನಾಥ ಶೆಟ್ಟಿ ಎಂದು ಗುರುತಿಸಲಾಗಿದೆ.
ಮೆಲ್ಕಾರ್ ಕಡೆಗೆ ಚಲಿಸುತ್ತಿದ್ದ ಕಾರಿಗೆ ಮೆಲ್ಕಾರ್‌ನಿಂದ ಪಾಣೆಮಂಗಳೂರು ಬಿ.ಸಿ. ರೋಡಿಗೆ ರಾಂಗ್ ಸೈಡಿನಿಂದ ಬರುತ್ತಿದ್ದ ಖಾಸಗಿ ಬಸ್ಸು ಢಿಕ್ಕಿ ಹೊಡೆದಿದೆ. ಬಸ್ಸು ಚಾಲಕನ ಅಜಾಗರೂಕತೆಯೇ ಈ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.
ಬಸ್ಸು ಢಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಗಂಭೀರ ಗಾಯಗೊಂಡ ಚಾಲಕನನ್ನು ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.