ಮಂಗಳೂರು: ನಿಷೇಧಿತ ಎಂಡಿಎಂಎ ಮಾರಾಟ ಮಾಡುತ್ತಿದ್ದ ರಿಕ್ಷಾ ಚಾಲಕನನ್ನು ಸಿಸಿಬಿ ಪೊಲೀಸರು ಬಂಧಿಸಿ, 75 ಗ್ರಾಂ ಎಂಡಿಎಂಎ ಅನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತನನ್ನು ಕಸಬಾ ಬೆಂಗರೆ ಮೊಹಮ್ಮದ್ ಅಬ್ದುಲ್ ಜಲೀಲ್(32) ಎಂದು ಗುರುತಿಸಲಾಗಿದೆ.
ಈತ ಬೆಂಗಳೂರಿನಿಂದ ಮಂಗಳೂರಿಗೆ ನಿಷೇಧಿತ ಮಾದಕ ವಸ್ತುವನ್ನು ತರಿಸಿಕೊಂಡು ನಂತರ ಅದನ್ನು ತನ್ನ ರಿಕ್ಷಾದಲ್ಲಿ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಈತನಿಂದ ಸುಮಾರು 5 ಲಕ್ಷ ರೂ. ಮೌಲ್ಯದ ಮಾದಕ ವಸ್ತು ವಶಕ್ಕೆ ಪಡೆಯಲಾಗಿದೆ.