ಬೆಂಗಳೂರು: ಕೆಲ ದಿನಗಳ ಹಿಂದಷ್ಟೇ ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ವಿರುದ್ಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ಸಲ್ಲಿಸಿದ್ದ ಐಪಿಎಸ್ ಅಧಿಕಾರಿ ವರ್ತಿಕಾ ಕಟಿಯಾರ್ ಅವರನ್ನು ವರ್ಗಾವಣೆ ಮಾಡಿದ್ದ ರಾಜ್ಯ ಸರ್ಕಾರ ಈಗ ಐಪಿಎಸ್ ಅಧಿಕಾರಿ ರೂಪಾ ಅವರನ್ನು ವರ್ಗಾವಣೆ ಮಾಡಿ ಆದೇಶ ಹೆೊರಡಿಸಿದೆ.
ರೂಪಾ ಅವರನ್ನು ಸಿಲ್ಕ್ ಮಾರ್ಕೆಟಿಂಗ್ ಬೋರ್ಡ್ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನೇಮಿಸಿ ವರ್ಗಾವಣೆ ಮಾಡಲಾಗಿದೆ.
ಕಳೆದ ಕೆಲ ದಿನಗಳ ಹಿಂದೆ ವರ್ತಿಕಾ ಅವರು ರೂಪಾ ವಿರುದ್ಧ ನೀಡಿದ ದೂರಿನಲ್ಲಿ ‘ರೂಪಾ ಅವರು ಕಿರಿಯ ಅಧಿಕಾರಿಗಳನ್ನು ಬಳಸಿಕೊಂಡು ತಮ್ಮ ಕಚೇರಿಯಿಂದ ದಾಖಲೆಗಳ ಫೋಟೋ ತೆಗೆದಿದ್ದಾರೆ ಎಂದು ಆರೋಪಿಸಿದ್ದರು.