ಹಾಸನ: ಶ್ಯೂರಿಟಿಗೆ ಸಹಿ ಹಾಕಲಿಲ್ಲ ಎಂದು ದಂಪತಿ ಬೆದರಿಕೆ ಒಡ್ಡಿದ ಹಿನ್ನೆಲೆಯಲ್ಲಿ ಮಹಿಳೆಯೋರ್ವರು ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೇಲೂರಿನ ಬಿಕ್ಕೋಡು ಗ್ರಾಮದಲ್ಲಿ ನಡೆದಿದೆ.
ನಂದೀಶ್ ಮತ್ತು ಧನುಶ್ರೀ ಎನ್ನುವ ದಂಪತಿ 10 ಲಕ್ಷ ರೂ. ಸಾಲದ ಶ್ಯೂರಿಟಿಗೆ ಸಹಿ ಹಾಕುವಂತೆ ಜಮುನಾ ಅವರಿಗೆ ಒತ್ತಡ ಹೇರುತ್ತಿದ್ದು, ಇದಕ್ಕೆ ಅವರು ಒಪ್ಪದೇ ಹೋದಾಗ ಅವರ ಮಗನನ್ನು ಕೊಲ್ಲುವುದಾಗಿ ಬೆದರಿಕೆ ಒಡ್ಡಿದ್ದರು. ಇದರಿಂದ ಬೇಸತ್ತ ಜಮುನಾ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೆತ್‌ನೋಟ್‌ನಲ್ಲಿ ಪೀಡಕರ ಹೆಸರು ಬರೆದಿಟ್ಟು ಸಾವಿಗೆ ಶರಣಾಗಿರುವುದಾಗಿದೆ.
ಮೃತರ ಪುತ್ರ ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡಿರುವ ಅರೇಹಳ್ಳಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.