ಬೆಂಗಳೂರು: ಉತ್ತರ ಪ್ರದೇಶ ಮೂಲದ ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದ ವ್ಯಕ್ತಿಯೊಬ್ಬ ತಾನಿದ್ದ ಅಪಾರ್ಟ್‌ಮೆಂಟ್‌ನ 12 ನೇ ಮಹಡಿಯಿಂದ ಕೆಳಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೃತನನ್ನು ಮಯಾಂಕ್ ರಜನಿ ಎಂದು ಗುರುತಿಸಲಾಗಿದೆ.
ಯುವತಿಯ ಜೊತೆ ಲಿವಿಂಗ್ ಟುಗೆದರ್ ಆಗಿ ಹರಳೂರು ಕೂಡ್ಲು ರಸ್ತೆಯಲ್ಲಿರುವ ಅಪಾರ್ಟ್‌ಮೆಂಟ್ ಒಂದರಲ್ಲಿ ವಾಸಿಸುತ್ತಿದ್ದ ಮಯಾಂಕ್ ಮಾರ್ಚ್ 4 ರಂದು ಮುಂಜಾನೆ ಕಟ್ಟಡದ 12 ನೇ ಮಹಡಿಯಿಂದ ಕೆಳಕ್ಕೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿದೆ. ಆತನ ಮೃತದೇಹ ನೋಡಿದ ಸೆಕ್ಯೂರಿಟಿ ಗಾರ್ಡ್ ಲಿವಿಂಗ್ ಟುಗೆದರ್‌ನಲ್ಲಿದ್ದ ಯುವತಿಗೆ ಮಾಹಿತಿ ನೀಡಿದ್ದು, ಯುವತಿ ತೀವ್ರ ಆಘಾತಕ್ಕೊಳಗಾಗಿದ್ದಾಳೆ.
ಮಯಾಂಕ್ ಬೆಂಗಳೂರಿನಲ್ಲಿ ಆರಂಭಿಸಿದ್ದ ಸ್ಚಾರ್ಟ್‌ಅಪ್ ಕಂಪನಿ ನಷ್ಟದಲ್ಲಿದ್ದು, ಇದರಿಂದಾಗಿ ಆರ್ಥಿಕ ಸಂಕಷ್ಚಕ್ಕೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಪರಪ್ಪನ ಅಗ್ರಹಾರ ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.