ಬೆಂಗಳೂರು: ಮೋಸ್ಟ್ ವಾಂಟೆಡ್ ರೌಡಿ ಶೀಟರ್ ಕುಣಿಗಲ್ ಗಿರಿಯನ್ನು ಬೆಂಗಳೂರು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.
ಗಿರಿ ವಿರುದ್ಧ ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿ ಕೇಸು ದಾಖಲಿಸಲಾಗಿದ್ದು, ಸದ್ಯ ಗಿರಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈತ ಬ್ಯಾಡರಹಳ್ಳಿಯಲ್ಲಿ ಕಳೆದ ಎರಡ್ಮೂರು ತಿಂಗಳುಗಳಿಂದ ಬಾಡಿಗೆ ಮನೆ ಮಾಡಿಕೊಂಡು ವಾಸವಾಗಿದ್ದ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಗಿರಿ, ಆತನ ಸಹಚರ ಹರೀಶ್ ಎಂಬವರನ್ನು ಬಂಧಿಸಿರುವುದಾಗಿದೆ.