ಅಥಣಿ: ಅಂತರಾಜ್ಯ ಕಳ್ಳ, ನ್ಯಾಯಾಧೀಶರ ಮನೆಗೆಯೇ ನುಗ್ಗಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮಹಾರಾಷ್ಟ್ರದ ಮೀರಜ್‌ನ ಕದಮವಾಡಿಯ ಅರ್ಜುನ್ ನಭೀಸಾಬ್ ಭೋಸಲೆ ಎಂದು ಗುರುತಿಸಲಾಗಿದೆ.
ಆರೋಪಿ ಅರ್ಜುನ್ ಕಳೆದ ಡಿಸೆಂಬರ್ ತಿಂಗಳಿನಲ್ಲಿ ಅಥಣಿ ನ್ಯಾಯಾಧೀಶರ ಮನೆಗೆ ನುಗ್ಗಿ ಕಳ್ಳತನ ಮಾಡಿ ಪರಾರಿಯಾಗಿದ್ದ. ಇದೀಗ ಪೊಲೀಸರು ಆತನನ್ನು ಬಂಧಿಸಿದ್ದು, 14.40 ಲಕ್ಷ ರೂ. ಗಳ ಚಿನ್ನಾಭರಣ ವಶಕ್ಕೆ ತೆಗೆದುಕೊಂಡಿದ್ದಾರೆ.
ಈತನ ಮೇಲೆ ಅಥಣಿ, ಕಾಗವಾಡ, ಐಗಳಿ, ಘಟಪ್ರಭಾ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿತ್ತು.