ನಕ್ಸಲ್ ಮುಕ್ತ ರಾಜ್ಯವಾದ ಹಿನ್ನೆಲೆಯಲ್ಲಿ ಈ ಕ್ರಮ ಎಂದ್ರು ಸಿದ್ದರಾಮಯ್ಯ
ಬೆಂಗಳೂರು: ಕರ್ನಾಟಕ ನಕ್ಸಲ್ ಮುಕ್ತ ರಾಜ್ಯವಾಗಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರ ನಕ್ಸಲ್ ನಿಗ್ರಹ ಪಡೆಯನ್ನು ವಿಸರ್ಜನೆ ಮಾಡಲಿದೆ ಎಂದು ಸಿ.ಎಂ. ಸಿದ್ದರಾಮಯ್ಯ ತಿಳಿಸಿದ್ದಾರೆ.
ಸರ್ಕಾರದ ಮುಂದೆ ಕೆಲ ಸಮಯದ ಹಿಂದಷ್ಟೇ 6 ಮಂದಿ ನಕ್ಸಲರು ಪುನರ್ವಸತಿ ಯೋಜನೆ ಸಮಿತಿಯಡಿ ಶರಣಾಗಿದ್ದು, ಈ ಕಾರಣದಿಂದ ನಕ್ಸಲ್ ನಿಗ್ರಹ ದಳ ವಿಸರ್ಜನೆಗೆ ತೀರ್ಮಾನಿಸಿರುವುದಾಗಿ ಹೇಳಿದ್ದಾರೆ.
ಹಾಗೆಯೇ ನಕ್ಸಲ್ ಪೀಡಿತ ಪ್ರದೇಶ ಕೆಲ ಮೂಲಸೌಕರ್ಯ ಅಭಿವೃದ್ಧಿ ಮಾಡಲು ಈ ಬಜೆಟ್‌ನಲ್ಲಿ 10 ಕೋಟಿ ರೂ. ಗಳ ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಾಗಿದೆ ಎಂದು ಅವರು ನುಡಿದಿದ್ದಾರೆ.
ರಾಜ್ಯದಲ್ಲಿ ಸೈಬರ್ ಅಪರಾಧ, ಡ್ರಗ್ಸ್ ದಂಧೆಯ ವಿರುದ್ದ ಕ್ರಮ ತೆಗೆದುಕೊಳ್ಳಲು ರಾಜ್ಯ ಸರ್ಕಾರ ಬದ್ಧವಾಗಿದೆ. ಈ ವಿಭಾಗವನ್ನು ಬಲಪಡಿಸುವ ನಿಟ್ಟಿನಲ್ಲಿ ಈ ಬಜೆಟ್‌ನಲ್ಲಿ 5 ಕೋಟಿ ರೂ. ಅನುದಾನ ನೀಡುವುದಾಗಿಯೂ ಸಿಎಂ ಮಾಹಿತಿ ನೀಡಿದ್ದಾರೆ.