ಮಂಗಳೂರು: 5ಜಿ ಜಾಮರ್‌ಗಳನ್ನು ನಿಷ್ಕ್ರಿಯಗೊಳಿಸಲು ಪ್ರಯತ್ನ ನಡೆಸಿದ 9 ಮಂದಿ ಖೈದಿಗಳ ವಿರುದ್ಧ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಿಲ್ಲಾ ಕಾರಾಗೃಹದಲ್ಲಿ ಅಳವಡಿಸಲಾಗಿದ್ದ 5ಜಿ ಜಾಮರ್‌ಗಳ ಮೇಲೆ ಉಪ್ಪು ಸುರಿಯುವ ಮೂಲಕ ಅವುಗಳನ್ನು ಕೆಡಿಸಲು 9 ಮಂದಿ ಖೈದಿಗಳು ಪ್ರಯತ್ನ ನಡೆಸಿದ್ದಾರೆ. ಜೈಲಿನಲ್ಲಿ ಇತ್ತೀಚೆಗಷ್ಟೇ 5ಜಿ ಜಾಮರ್‌ಗಳನ್ನು ಅಳವಡಿಸಲಾಗಿದ್ದು, ಇದನ್ನು ನಿಷ್ಕ್ರಿಯಗೊಳಿಸಲು ಖೈದಿಗಳು ಯತ್ನಿಸಿದ್ದಾರೆ.
ಈ ಸಂಬಂಧ ಇದರ ಗುತ್ತಿಗೆ ವಹಿಸಿಕೊಂಡ ಸಂಸ್ಥೆಯು ಕಾರಾಗೃಹ ಮತ್ತು ಸುಧಾರಣಾ ಸೇವೆ ಇಲಾಖೆಯ ಮಹಾನಿರ್ದೇಶಕರಿಗೆ ವರದಿ ನೀಡಿದ್ದು, ಇದರ ಆಧಾರದಲ್ಲಿ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದಾಗಿದೆ.