ಬೆಂಗಳೂರು: ಕೆಲ ದಿನಗಳ ಹಿಂದಷ್ಟೇ ದುಬೈನಿಂದ ಅಕ್ರಮವಾಗಿ ಚಿನ್ನ ಕಳ್ಳಸಾಗಾಟ ಮಾಡಿದ ನಟಿ ರನ್ಯಾ ರಾವ್ ಅವರನ್ನು ಕಸ್ಟಮ್ಸ್ ಅಧಿಕಾರಿಗಳು ಬಂದಿಸಿದ್ದರು. ಇದರ ಬೆನ್ನಲ್ಲೇ ಮತ್ತೊಂದು ಇಂತದ್ದೇ ಪ್ರಕರಣ ನಡೆದಿದ್ದು, ಆರೋಪಿಯನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಪ್ರಯಾಣಿಕನೊಬ್ಬ 3 ಕೆಜಿ 995 ಗ್ರಾಂಗಳಷ್ಟು ತೂಕದ ಚಿನ್ನ ಸಾಗಾಟ ಮಾಡಿದ್ದು, ಆರೋಪಿಯನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.
ದುಬೈನಿಂದ ಬೆಂಗಳೂರಿಗೆ ಬಂದಿದ್ದ ವ್ಯಕ್ತಿ ಶರ್ಟ್ ಒಳಗಡೆ ಚಿನ್ನ ಇರಿಸಿ ಕಳ್ಳಸಾಗಾಟ ಮಾಡುತ್ತಿದ್ದ. ಈ ಬಗ್ಗೆ ಮಾಹಿತಿ ಪಡೆದ ಅಧಿಕಾರಿಗಳು ಆರೋಪಿಯನ್ನು ಕಸ್ಟಡಿಗೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.