ಮಂಗಳೂರು: ನಗರದ ಕುದ್ರೋಳಿ ಅಳಕೆಯಲ್ಲಿರುವ ಕಟ್ಟಡವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ನಡೆದಿದೆ.
ಕಟ್ಟಡದ ಎರಡನೇ ಮಹಡಿಯಲ್ಲಿ ಹೆಲ್ತ್‌ಕೇರ್ ಸರ್ಜಿಕಲ್ಸ್‌ಗೆ ಸಂಬಂಧಪಟ್ಟ ವಸ್ತುಗಳನ್ನು ಮಾರಾಟ ಮಾಡುವ ಮಳಿಗೆ ಇದ್ದು, ಇದರಲ್ಲಿ ಅಗ್ನಿ ದುರಂತ ಸಂಭವಿಸಿರುವುದಾಗಿದೆ. ಇದರಿಂದಾಗಿ ಕಟ್ಟಡದ ಹೊರಗೆ ದಟ್ಟವಾಗಿ ಹೊಗೆ ತುಂಬಿಕೊಂಡಿದೆ.
ನಟನಾ ಸ್ಥಳಕ್ಕೆ ಆಗಮಿಸಿದ ಪಾಂಡೇಶ್ವರ ಅಗ್ನಿಶಾಮಕ ದಳದ ಸಿಬ್ಬಂದಿ ಇತರ ಅಂಗಡಿಗಳಲ್ಲಿದ್ದ ಜನರನ್ನು ಸುರಕ್ಷಿತ ಜಾಗಕ್ಕೆ ಕಳುಹಿಸಿ, ಬೆಂಕಿ ನಂದಿಸುವಲ್ಲಿ ಸಫಲರಾಗಿದ್ದಾರೆ.