ಮೈಸೂರು: ಮಲೆಮಹದೇಶ್ವರ ಬೆಟ್ಟದ ಸುತ್ತಮುತ್ತಲಿನಲ್ಲಿ ಅಕ್ರಮ ಮದ್ಯದ ಹಾವಳಿ ಹೆಚ್ಚಾಗಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿ ಸುಮಾರು 300 ಲೀ. ಮದ್ಯ ಜಪ್ತಿ ಮಾಡಿ, ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಕರ್ನಾಟಕ ಸರ್ಕಾರ ಮಲೆ ಮಹದೇಶ್ವರ ಬೆಟ್ಟವನ್ನು ಮೇಲು ಮುಕ್ತ ಪರಿಸರವನ್ನಾಗಿ ಮಾಡುವ ನಿಟ್ಟಿನಲ್ಲಿ ಪ್ರಯತ್ನ ನಡೆಸುತ್ತಿದ್ದಾರೆ. ಪರಿಸರದಲ್ಲಿ ಅಕ್ರಮ ಮದ್ಯ ಮಾರಾಟದ ಜಾಡು ಹಿಡಿದು ಶನಿವಾರ ದಾಳಿ ನಡೆಸಿದ ಪೊಲೀಸರು ಸುಮಾರು 300 ಲೀ. ಗಳಷ್ಟು ಅಕ್ರಮ ಮದ್ಯ ಜಪ್ತಿ ಮಾಡಿದ್ದಾರೆ.
ಹಾಗೆಯೇ ಈ ಪರಿಸರಕ್ಕೆ ಅಕ್ರಮವಾಗಿ ಮದ್ಯ ತಂದು ಮಾರಾಟ ಮಾಡಿ ಸ್ವಾಸ್ಥ್ಯ ಕದಡುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಈ ಪರಿಸರದಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟದ ವಿರುದ್ಧ ಹೆಚ್ಚು ನಿಗಾ ವಹಿಸಬೇಕಾದ ಅವಶ್ಯಕತೆ ಇದೆ ಎಂದು ಅಬಕಾರಿ ಅಧಿಕಾರಿಗಳು ಹೇಳಿದ್ದಾರೆ.