ಕಲ್ಬುರ್ಗಿ: ಇನ್ನೂ ಪ್ರಪಂಚ ಏನೆಂದು ಸರಿಯಾಗಿ ಅರಿಯದ ಇಬ್ಬರು ವಿದ್ಯಾರ್ಥಿಗಳು ಪ್ರೀತಿಸಿ, ಕೊನೆಗೆ ಆತ್ಮಹತ್ಯೆಗೆ ಶರಣಾದ ಘಟನೆ ಮಳ್ಳಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಮೃತರನ್ನು ಮಾಳಪ್ಪ ಮತ್ತು ನಸೀಮಾ ಎಂದು ಗುರುತಿಸಲಾಗಿದ್ದು, ಇಬ್ಬರೂ ಅಪ್ರಾಪ್ತರಾಗಿದ್ದಾರೆ. ಇವರಿಬ್ಬರೂ ಎಸ್‌ಎಸ್‌ಎಲ್‌ಸಿ ಓದುತ್ತಿದ್ದ ವಿದ್ಯಾರ್ಥಿಗಳಾಗಿದ್ದು, ಪರಸ್ಪರ ಪ್ರೇಮಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಈ ಇಬ್ಬರ ಪ್ರೇಮಕ್ಕೆ ಮನೆಯಲ್ಲಿ ವಿರೋಧ ವ್ಯಕ್ತವಾಗಿತ್ತು. ಜೊತೆಗೆ ನಸೀಮಾಗೆ ಬೇರೆ ಹುಡುಗನ ಜೊತೆಗೆ ಮದುವೆ ಗೊತ್ತು ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಇದರಿಂದ ಮನನೊಂದು ಇಬ್ಬರೂ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಸಂಬಂಧ ಯಡ್ರಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.