ಬೆಂಗಳೂರು: ದುಬೈನಿಂದ ಅಕ್ರಮ ಚಿನ್ನ ಸಾಗಾಟ ಮಾಡಿ DRI ಅಧಿಕಾರಿಗಳಿಂದ ಬಂಧನಕ್ಕೊಳಗಾದ ನಟಿ ರನ್ಯಾ ರಾವ್‌ಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ರನ್ಯಾಳನ್ನು ಕೋರ್ಟ್‌ಗೆ ಹಾಜರುಪಡಿಸಿದ ಸಂದರ್ಭದಲ್ಲಿ ಆಕೆ ಡಿಆರ್‌ಐ ಅಧಿಕಾರಿಗಳ ವಿರುದ್ಧ ಆರೋಪ ಮಾಡಿದ್ದು, ‘ನಾನು ಅಧಿಕಾರಿಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡುವುದನ್ನು ನಿಲ್ಲಿಸಿದಾಗಲೆಲ್ಲಾ ಅವರು ನನ್ನ ಮೇಲೆ ದೌರ್ಜನ್ಯ ಮಾಡಿದ್ದಾರೆ’ ಎಂದು ಹೇಳಿದ್ದಾರೆ.
ಅಧಿಕಾರಿಗಳ ಪ್ರಶ್ನೆಗೆ ನಾನು ಪ್ರತಿಕ್ರಿಯೆ ನೀಡದಿದ್ದಾಗ ಅವರು ನನಗೆ ಹೊಡೆದಿಲ್ಲ, ಆದರೆ ನಿಂದಿಸಿದ್ದಾರೆ. ಹಾಗೆಯೇ ಅಪರಿಚಿತ ಸ್ಥಳಗಳಿಗೆ ಕರೆದುಕೊಂಡು ಹೋಗಿ ತಮ್ಮ ಮಾತನ್ನು ಒಪ್ಪಿಕೊಳ್ಳುವ ಹಾಗೆ ಒತ್ತಡ ಹೇರಿದ್ದಾಗಿ ಆರೋಪಿಸಿದ್ದಾರೆ.
ಆದರೆ ತನಿಖೆಯ ವೇಳೆ ರನ್ಯಾಗೆ ಯಾವುದೇ ರೀತಿಯ ಕಿರುಕುಳ ನೀಡಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.