ಬೆಂಗಳೂರು: ರಾಜ್ಯದ ಭಾರತೀಯ ಜನತಾ ಪಕ್ಷದ ಜನರಲ್ ಸೆಕ್ರೆಟರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಬಿಜೆಪಿ ಜನರಲ್ ಸೆಕ್ರೆಟರಿ ಮಂಜುಳಾ ಅವರು ಮತ್ತಿಕೆರೆಯ ತಮ್ಮ ಸ್ವಗೃಹದಲ್ಲಿಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿದೆ.
ನನ್ನ ಸಾವಿಗೆ ನಾನೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಅವರು ಸಾವಿಗೆ ಶರಣಾಗಿದ್ದಾರೆ. ಇವರು ಮಲ್ಲೇಶ್ವರಂ ಮಂಡಲ ಕಾರ್ಯದರ್ಶಿಯಾಗಿದ್ದರು.
ಸ್ಥಳಕ್ಕೆ ಯಶವಂತಪುರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.