ಮಂಡ್ಯ: ಪ್ರೇಮ ವೈಫಲ್ಯಕ್ಕೆ ತುತ್ತಾಗಿ ಪುತ್ರಿ ಆತ್ಮಹತ್ಯೆ ಮಾಡಿಕೊಂಡು ಇಪ್ಪತ್ತು ದಿನಗಳಾದರೂ ಪೊಲೀಸರು ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ, ನ್ಯಾಯ ಕೊಡಿಸಿಲ್ಲ ಎಂದು ಬೇಸತ್ತು ಮಹಿಳೆಯೊಬ್ಬರು ಡೆತ್ ನೋಟ್ ಬರೆದಿಟ್ಟು ನೇಣು ಕುಣಿಕೆಗೆ ಕೊರಳೊಡ್ಡಿದ ಘಟನೆ ಹೆಬ್ಬಕವಾಡಿಯಲ್ಲಿ ನಡೆದಿದೆ.
ಮೃತರನ್ನು ಲಕ್ಷ್ಮೀ(37) ಎಂದು ಗುರುತಿಸಲಾಗಿದೆ. ಈಕೆಯ ಪುತ್ರಿ ಯುವಕನೊಬ್ಬನನ್ನು ಪ್ರೀತಿ ಮಾಡುತ್ತಿದ್ದು, ಆತ ಕೈಕೊಟ್ಟ ಹಿನ್ನೆಲೆಯಲ್ಲಿ ರೈಲಿನಡಿ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಈ ಸಂಬಂಧ ಲಕ್ಷ್ಮೀ ಮಂಡ್ಯ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಿದ್ದರು.
ಆದರೆ ಪ್ರಕರಣದಲ್ಲಿ ಆರೋಪಿಗಳೆಂದು ಹೆಸರು ನೀಡಿದವರ ವಿರುದ್ಧ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಬೇಸರಗೊಂಡ ಲಕ್ಷ್ಮೀ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ತಿಳಿದು ಬಂದಿದೆ.