ಮಂಗಳೂರು: ನೆರೆಯ ರಾಜ್ಯ ಕೇರಳದ ಜೊತೆಗೆ ನಂಟು ಹೊಂದಿದ, ನಿಷೇಧಿತ ಪಿಎಫ್ಐ ಸಂಘಟನೆಯೊಂದಿಗೆ ನಂಟಿರುವ 5 ಮಂದಿ ಕ್ರಿಮಿನಲ್‌ಗಳನ್ನು ಪೊಲೀಸರು ವಶಕ್ಕೆ ಪಡೆದು, ಅವರಿಂದ ಪಿಸ್ತೂಲ್‌ಗಳನ್ನು ವಶಕ್ಕೆ ಪಡೆದಿರುವ ಪೊಲೀಸರನ್ನು ಅಭಿನಂದಿಸುವುದಾಗಿ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ವೆಲ್ ತಿಳಿಸಿದ್ದಾರೆ.
ಈ ಆರೋಪಿಗಳಿಗೆ ಪಿಎಫ್‌ಐ ಜೊತೆಗಿರುವ ನಂಟೇನು ಎಂಬುದನ್ನು ಎನ್‌ಐಎ ತನಿಖೆ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಬಂಧಿತ ಆರೋಪಿಗಳು ಪಿಎಫ್‌ಐ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದವರಿಗೆ ಮಾರಾಟ ಮಾಡಿರುವುದು ಪತ್ತೆಯಾಗಿದೆ. ಇದು ದೇಶದ ಭದ್ರತೆಗೆ ಅಪಾಯ. ಇವರು ಯಾತಕ್ಕಾಗಿ ಶಸ್ತ್ರಾಸ್ತ್ರಗಳನ್ನು ಶೇಖರಣೆ ಮಾಡಿಟ್ಟುಕೊಂಡಿದ್ದಾರೆ ಎನ್ನುವ ಬಗ್ಗೆ ಎನ್‌ಐಎ ತನಿಖೆ ನಡೆಸಬೇಕು ಎಂದು ತಿಳಿಸಿದ್ದಾರೆ.
ಈ ಆರೋಪಿಗಳು ಹಿಂದೂಗಳನ್ನು ಗುರಿಯಾಗಿಸಿಕೊಂಡು ಯಾವುದೋ ಕುತಂತ್ರ ಮಾಡಿರುವ ಸಾಧ್ಯತೆ ಇದ್ದು, ಈ ಪ್ರಕರಣವನ್ನು ಎನ್‌ಐಎ ಕೈಗೆ ನೀಡಲು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಕರಾವಳಿ ಭಾಗದಲ್ಲಿ ನಿಷೇಧಿತ ಪಿಎಫ್‌ಐ ಸಂಘಟನೆ ಇನ್ನೂ ಸಕ್ರಿಯವಾಗಿದೆ. ಹಾಗೆಯೇ ಬಂಧಿತ ಆರೋಪಿಗಳಿಂದ ಶಸ್ತ್ರಾಸ್ತ್ರಗಳನ್ನು, ಕೆಜಿಗಟ್ಟಲೆ ಡ್ರಗ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಯಾವುದೇ ದೊಡ್ಡ ಮಟ್ಟದ ಕುಕೃತ್ಯ ಎಸಗಲು ಇವರು ಸಂಚು ನಡೆಸುತ್ತಿರುವ ಶಂಕೆ ಇದ್ದು, ಅಧಿಕಾರಿಗಳು ಇದನ್ನು ಬೇಧಿಸಬೇಕಿದೆ ಎಂದು ಪಂಪ್ವೆಲ್ ನುಡಿದಿದ್ದಾರೆ.