ಮಂಗಳೂರು: ಫೋಕ್ಸೋ ಪ್ರಕರಣದಲ್ಲಿ ಜೈಲು ಸೇರಿದ್ದ ಅಪರಾಧಿಯೋರ್ವ ಮಂಗಳೂರು ಜೈಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತನನ್ನು ಪ್ರಕಾಶ್ ಗೋಪಾಲ್ ಮೂಲ್ಯ(51) ಎಂದು ಗುರುತಿಸಲಾಗಿದೆ. ಶೌಚಾಲಯದ ಕಿಟಕಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ತಿಳಿದು ಬಂದಿದೆ. ಈತ ಮೂಡಬಿದಿರೆಯ ಲಾಡಿ ಎಂಬಲ್ಲಿಯಾತನಾಗಿದ್ದು, ಅದೇ ಪ್ರದೇಶದ ಅಪ್ರಾಪ್ತ ಯುವತಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ಸಂಬಂಧ ಮೂಡಬಿದಿರೆಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆತ ಮದ್ಯಪಾನ ಮಾಡಿ ತನ್ನ ಪತ್ನಿಗೂ ಚಿತ್ರಹಿಂಸೆ ನೀಡುತ್ತಿದ್ದ ಎನ್ನಲಾಗಿದೆ. ತನ್ನನ್ನು ಜಾಮೀನಿನ ಮೇಲೆ ಬಿಡಿಸಲು ಯಾರೂ ಬರುವುದಿಲ್ಲ ಎಂದು ತಿಳಿದು ಸಾವಿಗೆ ಶರಣಾಗಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ಸಂಬಂಧ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.