ಮಂಗಳೂರು: ಹಿಂದೂ ಯುವತಿಯನ್ನು ಕಾರಿನಲ್ಲಿ ಜೊತೆಗೆ ಕರೆದುಕೊಂಡು ಹೋಗುತ್ತಿದ್ದ ಎಂದು ಅನ್ಯಕೋಮಿನ ಯುವಕನನ್ನು ಅಡ್ಡಗಟ್ಟಿ, ಅರೆಬೆತ್ತಲೆ ಮಾಡಿ, ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿದ 19 ಮಂದಿ ಆರೋಪಿಗಳನ್ನು ಪ್ರಕರಣದಿಂದ ಖುಲಾಸೆಗೊಳಿಸಿ ನಗರದ 1 ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.
2015 ತನ್ನ ಅಂಗಡಿಯಲ್ಲಿ ಕೆಲಸಕ್ಕಿದ್ದ ಮಹಿಳೆಯನ್ನು ಕಾರಿನಲ್ಲಿ ಕೂರಿಸಿಕೊಂಡು ವ್ಯವಸ್ಥಾಪಕ ಶಾಕಿರ್ ಹೋಗುತ್ತಿದ್ದ. ಈ ಸಂದರ್ಭದಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರು ಅಡ್ಡಗಟ್ಟಿ ಹಲ್ಲೆ ನಡೆಸಿದ್ದರು.
ಸಹೋದ್ಯೋಗಿ ಯುವತಿ ಶಾಕಿರ್ ಬಳಿ ಹಣ ಕೇಳಿದ್ದು, ಶಾಕಿರ್ ಅತ್ತಾವರ ಬಳಿಯ ಎಡಿಎಂನಿಂದ ಹಣ ಡ್ರಾ ಮಾಡಿ ಆಕೆಗೆ ನೀಡಲು ಹೊರಟಿದ್ದ. ಈ ಸಂದರ್ಭದಲ್ಲಿ ಹಿಂದೂ ಯುವತಿಯ ಜೊತೆಗೆ ಹೋಗುತ್ತಿದ್ದಾನೆ ಎಂದು ಹಿಂದೂ ಸಂಘಟನೆಯ ಸದಸ್ಯರು ಆತನನ್ನು ಅಡ್ಡಗಟ್ಟಿ ಹಿಗ್ಗಾಮುಗ್ಗ ಥಳಿಸಿದ್ದರು. ಈ ಸಂಬಂಧ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಸಂಬಂಧ 19 ಜನರ ವಿರುದ್ಧ ಕೇಸು ದಾಖಲಾಗಿದ್ದು, ಪೊಲೀಸರಿಗೆ ಆರೋಪ ಸಾಬೀತು ಮಾಡಲು ಅಸಾಧ್ಯವಾದ ಹಿನ್ನೆಲೆಯಲ್ಲಿ ಈ ಪ್ರಕರಣದಿಂದ ಆರೋಪಿಗಳನ್ನು ಖುಲಾಸೆ ಮಾಡಲಾಗಿದೆ.