ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಅನಧಿಕೃತ ಬ್ಯಾನರ್, ಫ್ಲೆಕ್ಸ್‌ಗಳನ್ನು ಅಳವಡಿಸಿದವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.
ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರ ಆದೇಶದಂತೆ ಬಿಬಿಎಂಪಿ ಈ ಕ್ರಮಕ್ಕೆ ಮುಂದಾಗಿರುವುದಾಗಿದೆ.
ಬಳ್ಳಾರಿ ರಸ್ತೆಯುದ್ದಕ್ಕೂ ಫ್ಲೆಕ್ಸ್, ಬ್ಯಾನರ್‌ಗಳನ್ನು ಅಳವಡಿಸಲಾಗಿದ್ದು, ಅಧಿಕಾರಿಗಳು ಈ ವ್ಯಾಪ್ತಿಯಲ್ಲಿ ಪರಿಶೀಲನೆ ನಡೆಸಿ ತೆರವು ಕಾರ್ಯಾಚರಣೆ ನಡೆಸಿದ್ದಾರೆ. ಇವುಗಳನ್ನು ತೆರವು ಮಾಡಲು ತಗುಲುವ ಖರ್ಚನ್ನು ಫ್ಲೆಕ್ಸ್ ಅಳವಡಿಸಿದವರಿಂದಲೇ ವಸೂಲಿ ಮಾಡಲು ಕ್ರಮ ವಹಿಸಲಾಗಿದೆ. ಹಾಗೆಯೇ ಫ್ಲೆಕ್ಸ್ ಅಳವಡಿಸಿದವರ ವಿರುದ್ಧ 12 ಎಫ್‌ಐಆರ್ ಗಳನ್ನು ದಾಖಲು ಮಾಡಲಾಗಿದ್ದು, ಸುಮಾರು 12 ಲಕ್ಷ ರೂ. ದಂಡ ವಸೂಲಿ ಮಾಡಲಾಗಿದೆ ಎಂದು ತಿಳಿದು ಬಂದಿದೆ.