ಹಾಸನ: ಕುವೆಂಪು ನಗರದ ಬಿ.ಎಂ. ರಸ್ತೆಯಲ್ಲಿ ಇರುವ ರಾಜಕಾಲುವೆಯಲ್ಲಿ ನವಜಾತ ಹೆಣ್ಣು ಶಿಶುವನ್ನು ಯಾರೋ ದುಷ್ಕರ್ಮಿಗಳು ಎಸೆದು ಹೋಗಿದ್ದು, ಮಗು ಮೃತಪಟ್ಟಿದೆ. ಕಾಲುವೆಯ ಕೊಳಚೆ ನೀರಿನಲ್ಲಿ ಹೆಣ್ಣು ಶಿಶುವಿನ ಮೃತದೇಹ ಪತ್ತೆಯಾಗಿರುವುದಾಗಿದೆ. ತಕ್ಷಣವೇ ಕೆ.ಆರ್. ಪುರಂನ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿದ್ದು, ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಹೆಣ್ಣು ಶಿಶು ಎನ್ನುವ ಕಾರಣಕ್ಕೆ ಈ ಕೃತ್ಯ ಎಸಗಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಮಗುವಿನ ಶವದಲ್ಲಿ ಹೊಕ್ಕುಳ ಬಳ್ಳಿಯೂ ಹಾಗೆಯೇ ಇದ್ದು, ಈ ಕುಕೃತ್ಯ ಎಸಗಿದವರ ಪತ್ತೆಗೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.