ಬೀದರ್: ಯುವತಿಯೊಬ್ಬಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಆಳಂದಿ ಗ್ರಾಮದಲ್ಲಿ ನಡೆದಿದೆ. ಮೃತ ಯುವತಿಯನ್ನು ಪ್ರಿಯಾಂಕಾ ಚೌವಾಣ್(20) ಎಂದು ಗುರುತಿಸಲಾಗಿದೆ. ಈ ಸಂಬಂಧ ಯುವತಿಯ ಕುಟುಂಬಸ್ಥರು ಭಾಲ್ಕಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲು ಮಾಡಿದ್ದು, ಮನೆ ಮಾಲೀಕ ಬಾಡಿಗೆ ಹಣಕ್ಕೆ ಸಂಬಂಧಿಸಿದ ಹಾಗೆ ಕಿರಿಕಿರಿ ಮಾಡುತ್ತಿದ್ದುದಾಗಿ ದೂರಿನಲ್ಲಿ ಹೇಳಲಾಗಿದೆ. ಇದು ಆತ್ಮಹತ್ಯೆಯೋ, ಕೊಲೆಯೋ ಎನ್ನುವುದು ತನಿಖೆಯ ನಂತರವಷ್ಟೇ ತಿಳಿಯಲಿದೆ ಎಂದು ಪೊಲೀಸರು ಹೇಳಿದ್ದಾರೆ.